ಲಿಂ. ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ಆಗ್ರಹ

ಲಿಂ. ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ಆಗ್ರಹ

ಲಿಂಗೈಕ್ಯ ಸಿದ್ದಗಂಗಾ ಶ್ರೀಗಳ ಸ್ಮರಣೆ ಸಮಾರಂಭದಲ್ಲಿ ದಿನೇಶ್ ಕೆ. ಶೆಟ್ಟಿ

ದಾವಣಗೆರೆ, ಜ. 22 – ನಡೆದಾಡುವ ದೇವರು ಎಂದೇ ಹೆಸರಾಗಿರುವ ತ್ರಿವಿಧ ದಾಸೋಹಿ ಲಿಂಗೈಕ್ಯ ಸಿದ್ದಗಂಗಾ ಮಠದ ಡಾ. ಶಿವಕುಮಾರ ಮಹಾಸ್ವಾಮಿಗಳಿಗೆ ಕೇಂದ್ರ ಸರ್ಕಾರ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡುವಂತೆ, ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಆಗ್ರಹಿಸಿದ್ದಾರೆ.

ಅವರಿಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ  ಹಮ್ಮಿಕೊಂಡಿದ್ದ ತ್ರಿವಿಧ ದಾಸೋಹಿ ಲಿಂಗೈಕ್ಯ ಸಿದ್ದಗಂಗಾ ಮಠದ ಡಾ. ಶಿವಕುಮಾರ ಮಹಾಸ್ವಾಮಿಗಳ ಪುಣ್ಯಸ್ಮರಣೆ ಸಮಾರಂಭದಲ್ಲಿ ಭಾಗವಹಿಸಿ, ಅವರು ಮಾತನಾಡಿದರು.

ತ್ರಿವಿಧ ದಾಸೋಹಿ ಲಿಂಗೈಕ್ಯ ಸಿದ್ದಗಂಗಾ ಮಠದ ಡಾ. ಶಿವಕುಮಾರ ಮಹಾಸ್ವಾಮಿಗಳವರು ಅನ್ನ, ಆಶ್ರಯ, ಜ್ಞಾನದಂತಹ ದಾಸೋಹವನ್ನು ಯಾವುದೇ ಫಲಾಪೇಕ್ಷೆ ಇಲ್ಲದೇ ಮಾಡುತ್ತಾ, ಅವರ ಋಣವನ್ನು ನಾವು ಎಂದಿಗೂ ತೀರಿಸಲು ಸಾಧ್ಯವಿಲ್ಲ. ಅವರ ಸೇವೆಗೆ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಪ್ರಶಸ್ತಿ ನೀಡಿದರೆ ಅವರಿಗೆ ಕನಿಷ್ಟ ಗೌರವವಾದರೂ ನೀಡಿದಂತಾಗಲಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

ಮಹಿಳಾ ಕಾಂಗ್ರೆಸ್‍ನ ದ್ರಾಕ್ಷಾಯಣಮ್ಮ, ಮಹಾನಗರ ಪಾಲಿಕೆ ಸದಸ್ಯ ಎ. ನಾಗರಾಜ್ ಮಾತನಾಡಿ, ಲಿಂಗೈಕ್ಯ ಸಿದ್ದಗಂಗಾ ಮಠದ ಡಾ. ಶಿವಕುಮಾರ ಮಹಾಸ್ವಾಮಿಗಳವರ ಸೇವೆಯನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್‍ನ ಮಂಗಳಮ್ಮ, ರಾಜೇಶ್ವರಿ, ಗೀತಾ ಚಂದ್ರಶೇಖರ್, ಕೇರಂ ಗಣೇಶ್, ಎಸ್. ರವಿ, ಮುಜಾಹಿದ್, ಸುರೇಶ್ ಜಾಧವ್, ಪ್ರವೀಣ್, ಗೋಪಾಲಕೃಷ್ಣ, ಪರಶುರಾಮ್, ಸತೀಶ್ ಶೆಟ್ಟಿ, ಯುವರಾಜ್ ಮತ್ತಿತರರಿದ್ದರು.

error: Content is protected !!