ದಾವಣಗೆರೆ, ಜ. 26 – ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಸಾಧಕರಿಗೆ ಪ್ರತಿವರ್ಷ ವಿಶ್ವವಾಣಿಯು `ಗ್ಲೋಬಲ್ ಅಚೀವರ್ಸ್ ಅವಾರ್ಡ್’ ನೀಡಲಾಗುತ್ತಿದ್ದು, ಈ ಬಾರಿಯ ಪ್ರಶಸ್ತಿಗೆ ವಾಣಿಜ್ಯೋದ್ಯಮಿ, ಬಿಜೆಪಿ ಯುವ ಮುಖಂಡ ಜಿ.ಎಸ್. ಅನಿತ್‌ಕುಮಾರ್ ಆಯ್ಕೆಯಾಗಿದ್ದಾರೆ.
ಓಮನ್ ರಾಜಧಾನಿ ಮಸ್ಕತ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅನಿತ್‌ಕುಮಾರ್ ಪ್ರಶಸ್ತಿ ಸ್ವೀಕರಿಸಲಿ ದ್ದಾರೆ. ರಾಜಕೀಯವಾಗಿ ತಾತಾ ದಿ. ಜಿ. ಮಲ್ಲಿಕಾರ್ಜುನಪ್ಪ, ತಂದೆ – ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಗರಡಿ ಯಲ್ಲಿ ಪಳಗಿರುವ ಅನಿತ್‌ಕುಮಾರ್ ಬಿಜೆಪಿಯ ಭರವಸೆಯ ನಾಯಕರು.
ಜಿ.ಮಲ್ಲಿಕಾರ್ಜುನಪ್ಪ ಶ್ರೀಮತಿ ಹಾಲಮ್ಮ ಚಾರಿಟಿ ಫೌಂಡೇಶನ್ ಮೂಲಕ ಹಲವಾರು ಸಾಮಾಜಿಕ ಕಾರ್ಯ ಮಾಡುತ್ತಾ ಬಂದಿದ್ದಾರೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಚಿತ್ರದುರ್ಗ, ಹರಿಹರ, ಹರಪನಹಳ್ಳಿ ತಾಲ್ಲೂಕು ಆಸ್ಪತ್ರೆಗೆ 1.89 ಕೋಟಿ ರೂ. ಮೊತ್ತದ ಆಕ್ಸಿಜನ್ ಪ್ಲಾಂಟ್, ಬಡವರಿಗೆ ತಮ್ಮ ಟ್ರಸ್ಟ್ ಮೂಲಕ ಸಾವಿರಾರು ಉಚಿತ ರೇಷನ್ ಕಿಟ್, ಲಕ್ಷಾಂತರ ಫೇಸ್ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಾಟಲ್ ನೀಡಿ ಕೋವಿಡ್ ಸಂಕಷ್ಟದಿಂದ ಜನರನ್ನು ಪಾರು ಮಾಡಿದವರು.
ಜಿಎಂ ಗ್ರೂಪ್ ನಿರ್ದೇಶಕರಾಗಿ, ಭೀಮ ಸಮುದ್ರದ ಶ್ರೀಶೈಲ ಎಜುಕೇಷನ್ ಟ್ರಸ್ಟ್ ಖಜಾಂಜಿಯಾಗಿ, ಜಿ. ಮಲ್ಲಿಕಾರ್ಜುನಪ್ಪ, ಶ್ರೀಮತಿ ಹಾಲಮ್ಮ ಚಾರಿಟಿ ಫೌಂಡೇಷನ್ ಟ್ರಸ್ಟಿಯಾಗಿ, ಭೀಮ ಸಮುದ್ರ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಅವರ ಸೇವೆ ಸಲ್ಲಿಸುತ್ತಿದ್ದಾರೆ.