ಶ್ರೀ ರಂಭಾಪುರಿ ಪೀಠ, ಜ. 27 – ರಂಭಾಪುರಿ ಪೀಠದ ವೀರ ಸಿಂಹಾಸನಾಧೀಶ್ವರ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ 34ನೇ ವರ್ಷದ ಪೀಠಾರೋಹಣ ವರ್ಧಂತಿ ಮಹೋತ್ಸವ – ಜನ ಜಾಗೃತಿ ಧರ್ಮ ಸಮಾರಂಭವು ಹಗರಿಬೊಮ್ಮನಹಳ್ಳಿ ತಾಲ್ಲೂಕು ಹಂಪಸಾಗರದಲ್ಲಿ ಫೆಬ್ರವರಿ 1 ಶನಿವಾರ ಬೆಳಿಗ್ಗೆ 11.30 ಗಂಟೆಗೆ ಜರುಗಲಿದೆ.
ಅಡ್ಡಪಲ್ಲಕ್ಕಿ : ಪೀಠಾರೋಹಣ ವರ್ಧಂತಿ ಮಹೋತ್ಸವದ ನಿಮಿತ್ಯ ಬೆಳಿಗ್ಗೆ 10 ಗಂಟೆಗೆ ರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗುವುದು. ಸಮಾರಂಭದ ಅಂಗವಾಗಿ ಫೆಬ್ರವರಿ 1 ರಂದು ಕೃಷಿ ಮೇಳ ಏರ್ಪಡಿಸಲಾಗಿದೆ.