ರಂಭಾಪುರಿ ಪೀಠದ ವೀರ ಸಿಂಹಾಸನಾಧೀಶ್ವರ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ 34ನೇ ವರ್ಷದ ಪೀಠಾರೋಹಣ ವರ್ಧಂತಿ ಮಹೋತ್ಸವ – ಜನ ಜಾಗೃತಿ ಧರ್ಮ ಸಮಾರಂಭವು ಹಗರಿಬೊಮ್ಮನಹಳ್ಳಿ ತಾಲ್ಲೂಕು ಹಂಪಸಾಗರದಲ್ಲಿ ಇಂದು ಬೆಳಿಗ್ಗೆ 11.30 ಗಂಟೆಗೆ ಜರುಗಲಿದೆ.
ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಅಮ್ಮಿನಬಾವಿ ಪಂಚಗೃಹ ಹಿರೇಮಠದ ಶ್ರೀ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು ವಹಿಸುವರು. ಮರಿಯಮ್ಮನಹಳ್ಳಿ ಮಲ್ಲಿಕಾರ್ಜುನ ಶಿವಾಚಾರ್ಯರು, ನೆಗಳೂರು ಗುರುಶಾಂತ ಶಿವಾಚಾರ್ಯರು, ಅಮ್ಮಿನಬಾವಿ ಅಭಿನವ ಶಾಂತಲಿಂಗ ಶಿವಾಚಾರ್ಯರು, ಹರಪನಹಳ್ಳಿ ವರಸದ್ಯೋಜಾತ ಶಿವಾಚಾರ್ಯರು, ನಂದಿಪುರದ ಡಾ. ಮಹೇಶ್ವರ ಸ್ವಾಮಿಗಳು ನೇತೃತ್ವ ವಹಿಸುವರು.
ಅಡ್ಡಪಲ್ಲಕ್ಕಿ : ಪೀಠಾರೋಹಣ ವರ್ಧಂತಿ ಮಹೋತ್ಸವದ ನಿಮಿತ್ಯ ಬೆಳಿಗ್ಗೆ 10 ಗಂಟೆಗೆ ರಂಭಾಪುರಿ ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗುವುದು. ಸಮಾರಂಭದ ಅಂಗವಾಗಿ ಕೃಷಿ ಮೇಳ ಇಂದು ನಡೆಯಲಿದೆ.