ದಾವಣಗೆರೆ, ಫೆ. 2 – ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಕೇಂದ್ರ ಸರ್ಕಾ ರದ 2025ನೇ ಸಾಲಿನ ಬಜೆಟ್ ಮೂಗಿಗೆ ತುಪ್ಪ ಸವರುವ ಬಜೆಟ್ ಆಗಿದೆ. ಕರ್ನಾಟಕದ ಪಾಲಿಗೆ ನಿರಾಶದಾಯಕ ಆಯವ್ಯಯ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಟ್ಟುವಳ್ಳಿ ಪ್ರವೀಣ್ ಕುಮಾರ್ ತಿಳಿಸಿದ್ದಾರೆ. ಆಯವ್ಯಯದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಕರ್ನಾಟಕಕ್ಕೆ ಕೇವಲ ಒಂದೇ ಒಂದು ಯೋಜನೆ ಘೋಷಿಸಿದ್ದು ಬಿಟ್ಟರೆ, ಯಾವ ಸೌಲಭ್ಯವನ್ನೂ ನೀಡಿಲ್ಲ. ದೆಹಲಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಟ್ಯಾಕ್ಸ್ ವಿನಾಯಿತಿ ನೀಡಲಾಗಿದೆ. 12 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ರೈತರ ಸಾಲ ಮನ್ನಾ ಮಾಡಬೇಕು. ವೈಜ್ಞಾನಿಕ ದರ ನಿಗದಿಪಡಿಸಬೇಕು. ಇಂಥ ವಿಚಾರಗಳ ಬಗ್ಗೆ ಗಮನವನ್ನೇ ಹರಿಸಿಲ್ಲ ಎಂದು ತಿಳಿಸಿದ್ದಾರೆ.
February 3, 2025