ದಾವಣಗೆರೆ, ಫೆ. 2 – ಮಹಾನಗರ ಪಾಲಿಕೆ ಹಾಗೂ ಚಿಗಟೇರಿ ಜಿಲ್ಲಾ ಆಸ್ಪತ್ರೆ ವತಿಯಿಂದ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತಾ ಆಂದೋಲನವನ್ನು ಕೈಗೊಂಡು ಆಸ್ಪತ್ರೆ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯ ಗಡಿಗುಡಾಳು ಮಂಜುನಾಥ್, ಆರೋಗ್ಯಸ್ಥಾಯಿ ಸಮಿತಿ ಸದಸ್ಯರು, ಮಹಾನಗರ ಪಾಲಿಕೆ, ದಾವಣಗೆರೆ ಇವರು ನೇತೃತ್ವ ವಹಿಸಿದ್ದು. ಈ ಸಂದರ್ಭದಲ್ಲಿ ಆಸ್ಪತ್ರೆಯ ಅಧೀಕ್ಷಕ ಎಂ.ಬಿ. ನಾಗೇಂದ್ರಪ್ಪ ಮತ್ತು ಇತರರು ಭಾಗವಹಿಸಿದ್ದರು.
February 3, 2025