ಹೆಣ್ಣು ಮಕ್ಕಳಿಗೆ ಸಮಾನ ಅವಕಾಶ ನೀಡುವ ಸಂಕಲ್ಪ ಮಾಡೋಣ

ಹೆಣ್ಣು ಮಕ್ಕಳಿಗೆ ಸಮಾನ ಅವಕಾಶ  ನೀಡುವ ಸಂಕಲ್ಪ ಮಾಡೋಣ

ಮಲೇಬೆನ್ನೂರು, ಫೆ. 4 – ಹೊಳೆಸಿರಿಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ವೈದ್ಯಾಧಿಕಾರಿ ಡಾ. ಚೇತನ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಡಾ. ಚೇತನ್ ಅವರು, ಹೆಣ್ಣು ಮಕ್ಕಳಿಗೆ ಶಿಕ್ಷಣ, ಅಧಿಕಾರ ನೀಡಿದರೆ ಇಡೀ ಕುಟುಂಬದ ಭವಿಷ್ಯವೂ ಅವರೊಡನೆ ಪ್ರಜ್ವಲಿಸುತ್ತದೆ. 

ಹೆಣ್ಣು ಮಕ್ಕಳಿಗೆ ಆರೋಗ್ಯಕರ, ಸುರಕ್ಷಿತ ವಾತಾವರಣ ಸೃಷ್ಟಿಸುವ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸೋಣ ಮತ್ತು ಸಮಾಜದಲ್ಲಿ ಸಮಾನ ಅವಕಾಶಗಳನ್ನು ಹೆಣ್ಣು ಮಕ್ಕಳಿಗೆ ನೀಡುವ ಸಂಕಲ್ಪ ಮಾಡೋಣ ಎಂದರು. ರಾಮಾಯಣದಲ್ಲಿ ಹೆಣ್ಣಿನ ಪ್ರಾಮುಖ್ಯತೆ ಮತ್ತು ಮಹತ್ವವನ್ನು ಡಾ. ಚೇತನ್ ತಿಳಿಸಿಕೊಟ್ಟರು. 

ಸಂಪನ್ಮೂಲ ವ್ಯಕ್ತಿ ಸದಾನಂದ ಮಾತನಾಡಿ, ಸಮಾಜದಲ್ಲಿ ಹೆಣ್ಣನ್ನು ಗೌರವಿಸುವ ಕೆಲಸವನ್ನು ಎಲ್ಲರೂ ಮಾಡಬೇಕೆಂದರು. 

error: Content is protected !!