ಅಧಿವಕ್ತ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ, ಜಿಲ್ಲಾ ಘಟಕ, ಎಸ್ಬಿಸಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಅಥಣಿ ಸ್ನಾತಕೋತ್ತರ ಕೇಂದ್ರ, ಅಥಣಿ ಸಂಯುಕ್ತ ಪದವಿ ಪೂರ್ವ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ.
ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಕಾರ್ಯಕ್ರಮ ಉದ್ಘಾಟಿಸಿ, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಕುರಿತು ಉಪನ್ಯಾಸ ನೀಡಲಿದ್ದಾರೆ.
ಅಧಿವಕ್ತ ಪರಿಷತ್ ಜಿಲ್ಲಾಧ್ಯಕ್ಷ ಎಲ್.ದಯಾನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ, ವಿನಾಯಕ ಎಜುಕೇಷನ್ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಅಥಣಿ ವೀರಣ್ಣ ಭಾಗವಹಿ ಸುವರು. ಬಿ.ಸಿ. ಉಮಾಪತಿ, ಎನ್.ಎ. ಮುರುಗೇಶ್, ಆರ್. ಯೋಗೇಶ್ವರಪ್ಪ, ಎಂ.ಎಸ್. ಮನೋಜ್ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.