ದಾವಣಗೆರೆ, ಫೆ.9- ಪ್ರಯಾಗ ರಾಜ್‌ನ ತ್ರಿವೇಣಿ ಸಂಗಮದಲ್ಲಿ ತುಮ ಕೂರು ಜಿಲ್ಲೆಯ ನೊಣವಿನ ಕೆರೆಯ ಶ್ರೀ ಕಾಡ ಸಿದ್ದೇಶ್ವರ ಮಠದ ಶ್ರೀ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಮಹಾಸ್ವಾಮೀಜಿ ಪವಿತ್ರ ಅಮೃತ ಸ್ನಾನ ಮಾಡಿದರು.
ಶ್ರೀಗಳ ಜೊತೆ ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕುಟುಂಬದವರು ಪವಿತ್ರ ಅಮೃತ ಸ್ನಾನ ಮಾಡಿ ಶ್ರೀಗಳ ಆಶೀರ್ವಾದ ಪಡೆದರು. ನಂಬಿಕೆ, ಭಕ್ತಿ ಮತ್ತು ಆಧ್ಯಾತ್ಮಿಕತೆಯ ಸಂಗಮವಾದ ಪ್ರ ಯಾಗ್‌ರಾಜ್‌ನ ಮಹಾಕುಂಭದಲ್ಲಿ ತ್ರಿವೇಣಿ ಸಂಗಮಕ್ಕೆ ಡಿ.ಕೆ. ಶಿವಕುಮಾರ್ ಪೂಜೆ ಸಲ್ಲಿಸಿದರು.