ಜಗಳೂರು, ಪೆ. 8- ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರು, ಮುಖಂಡರು ಇಲ್ಲಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಎಚ್. ಪಿ ರಾಜೇಶ್, ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಆಡಳಿತಕ್ಕೆ ದೆಹಲಿಯ ಜನತೆ ಬಿಜೆಪಿಗೆ ಅಧಿಕಾರ ನೀಡಿದ್ದಾರೆ. ಆಮ್ ಆದ್ಮಿ ಪಕ್ಷದ ಭ್ರಷ್ಟಾಚಾರದಿಂದ ಬೇಸತ್ತು ಹೋಗಿದ್ದ ದೆಹಲಿ ಜನತೆ ಬಿಜೆಪಿ ಪಕ್ಷಕ್ಕೆ ಪೂರ್ಣ ಅಧಿಕಾರ ನೀಡಿದೆ ಎಂದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷ ನವೀನ್ ಕುಮಾರ್, ಮಾಜಿ ಅಧ್ಯಕ್ಷ ಆರ್.ತಿಪ್ಪೇಸ್ವಾಮಿ, ಬಿಜೆಪಿ ಮುಖಂಡರಾದ ಡಿ.ವಿ ನಾಗಪ್ಪ, ಜೆ.ವಿ. ನಾಗರಾಜ್, ಬಿಸ್ತುವಳ್ಳಿ ಬಾಬು, ಕೆ. ಟಿ. ಬಡಯ್ಯ, ಪೂಜಾರ್ ಹನುಮಂತಪ್ಪ, ವಕೀಲರಾದ ಹನುಮಂತಪ್ಪ, ಮರೇನಹಳ್ಳಿ, ಶೇಖರಪ್ಪ, ದಾಸಪ್ಪ ನಾಯಕ, ಶಿವಮೂರ್ತಿ, ಓಬಳೇಶ್, ಹುಲಿಕುಂಟಶೆಟ್ಟಿ, ಕ್ಯಾಂಪ್ ರಾಜಣ್ಣ ಮುಂತಾದವರು ಇದ್ದರು.