ದಾವಣಗೆರೆ, ಫೆ. 10-ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ನಗರದ ಎಸ್. ಎ. ಎಸ್. ಎಸ್. ಯೋಗ ಕೇಂದ್ರದ ಶ್ರೀಮತಿ ಎಸ್.ಪಿ. ಲಾವಣ್ಯ ಶ್ರೀಧರ್ ಅವರಿಗೆ ರಾಷ್ಟ್ರಮಟ್ಟದ ಕಾಯಕ ರತ್ನ ಪ್ರಶಸ್ತಿ ಲಭಿಸಿದೆ. ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ, ವತಿಯಿಂದ ರಾಯಚೂರಿನಲ್ಲಿ ಕಳೆದ ವಾರ ನಡೆದ ರಾಷ್ಟ್ರಮಟ್ಟದ ಕನ್ನಡ ಕಲರವ ಸಮ್ಮೇಳನದಲ್ಲಿ ಬೆಳಕು ಟ್ರಸ್ಟ್ ಅಧ್ಯಕ್ಷ ಅಣ್ಣಪ್ಪ ಮೇಟಿ ಗೌಡ್ರು ಇವರ ಅಧ್ಯಕ್ಷತೆಯಲ್ಲಿ ಯೋಗ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ ಲಾವಣ್ಯ ಶ್ರೀಧರ್ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಲಾವಣ್ಯ ಶ್ರೀಧರ್‌ಗೆ ರಾಷ್ಟ್ರ ಮಟ್ಟದ ಕಾಯಕ ರತ್ನ ಪ್ರಶಸ್ತಿ
