ಹರಿಹರ, ಫೆ. 13- ಕಳೆದ 5 ವರ್ಷಗಳಿಂದ ನಡೆಯುತ್ತಿದ್ದ ತುಂಗಾರತಿ ಕಾರ್ಯಕ್ರಮವನ್ನು, ಈ ವರ್ಷದಿಂದ ತುಂಗಭದ್ರಾ ಆರತಿ ಕಾರ್ಯಕ್ರಮವನ್ನಾಗಿ ಆಚರಿಸಲು ಸಕಲ ಸಿದ್ದತೆಗಳು ಪೂರ್ಣಗೊಂಡಿವೆ ಎಂದು ಕೋಡಿಯಾಲ ಹೊಸಪೇಟೆಯ ಪುಣ್ಯಕೋಟಿ ಮಠದ ಶ್ರೀ ಜಗದೀಶ್ವರ ಸ್ವಾಮೀಜಿ ತಿಳಿಸಿದರು.
ಇಲ್ಲಿಗೆ ಸಮೀಪದ ಕೋಡಿಯಾಲ ಹೊಸಪೇಟೆ (ಕುಮಾರಪಟ್ಟಣ) ಗ್ರಾಮದ ಪುಣ್ಯಕೋಟಿ ಮಠದಲ್ಲಿ ಮಂಗಳವಾರ ನಡೆದ ಪತ್ರಿಕಾಗೊಷ್ಠಿಯಲ್ಲಿ ಪ್ರಚಾರ ಪರಿಕರಗಳನ್ನು ಬಿಡುಗಡೆಗೊಳಿಸಿ ಶ್ರೀಗಳು ಮಾತನಾಡಿದರು.
ತುಂಗಾರತಿ ಕಾರ್ಯಕ್ರಮವನ್ನು ಈ ವರ್ಷದಿಂದ ನಾಡಿದ್ದು ದಿನಾಂಕ 15 ರಂದು ಸಂಜೆ 5 ಗಂಟೆಗೆ ಮಠದ ಹತ್ತಿರದ ತುಂಗಭದ್ರಾ ನದಿಯ ದಡದಲ್ಲಿ ನದಿಗೆ ಆರತಿ ಕಾರ್ಯಕ್ರಮವು ಬಹು ವಿಜೃಂಭಣೆಯಿಂದ ನಡೆಯಲಿದೆ ಎಂದು ಶ್ರೀಗಳು ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾ ದರು ವಹಿಸುವರು. ಸವಣೂರು ದೊಡ್ಡಹುಣಸೇ ಕಲ್ಮಠದ ಶ್ರೀ ಚನ್ನಬಸವ ಸ್ವಾಮಿಗಳು, ಕಡೆನಂದಿಹಳ್ಳಿ ರೇವಣಸಿದ್ದೇಶ್ವರ ಪುಣ್ಯಾಶ್ರಮದ ಶ್ರೀ ರೇವಣಸಿದ್ದ ಸ್ವಾಮಿಗಳು, ಅಕ್ಕಿಆಲೂರು ಮುತ್ತಿನಕಂತಿಮಠದ ಶ್ರೀ ಚಂದ್ರಶೇಖರ ಸ್ವಾಮಿಗಳು, ನಾಗವಂದ ಧರ್ಮಕ್ಷೇತ್ರದ ಶ್ರೀ ಶಿವಯೋಗಿ ಶಿವಾನಂದ ಸ್ವಾಮಿಗಳು, ವಿಜಯಪುರ ಸಿದ್ದಲಿಂಗೇಶ್ವರ ಮಠದ ಸಿದ್ದಲಿಂಗ ಸ್ವಾಮಿಗಳು ಭಾಗವಹಿಸುವರು.
ಹಾವೇರಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರಿಗೆ ವಿಶ್ವಮಾತೆ ಪುಣ್ಯಕೋಟಿ ಪ್ರಶಸ್ತಿ ಹಾಗೂ ಮೈಸೂರು ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯದ ಕುಲಪತಿ ಡಾ. ಶರಣಬಸಪ್ಪ ವಿ.ಹಲಸೆ ಅವರಿಗೆ ಆಚಾರ್ಯ ವ ಮಹಾಚಾರ್ಯ ಸೇವಾ ವಿಭೂಷಣ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.
ಶಾಸಕ ಪ್ರಕಾಶ ಕೋಳಿವಾಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಮಾಜಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಡಾ.ಪ್ರಭಾ ಮಲ್ಲಿಕಾರ್ಜುನ್, ರಾಜ್ಯ ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ, ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಗ್ರಾಸಿಂ ಕಾರ್ಖಾನೆಯ ಅಧ್ಯಕ್ಷ ಸೌಮ್ಯಕಾಂತ್ ಮೊಹಂತಿ, ಹೈಕೋರ್ಟ್ ಹಿರಿಯ ನ್ಯಾಯವಾದಿ ಶಂಕರ ಹೆಗಡೆ, ತಪೋವನದ ಶಶಿಕುಮಾರ ಮೆಹರವಾಡೆ, ಪ್ರಥಮ ದರ್ಜೆ ಗುತ್ತಿಗೆದಾರ ಶಂಕರ ಗಡ್ಡದ, ಕೋಡಿಯಾಲ ಹೊಸಪೇಟೆ ಗ್ರಾಮದ ನೀಲಮ್ಮ ಸಣ್ಣಹನುಮಂತಗೌಡ ಪಾಟೀಲ, ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ, ಶಾಸಕ ಬಸವ ರಾಜ ಶಿವಣ್ಣನವರ, ಮಾಜಿ ಸಂಸದ ಜಿ.ಎಂ ಸಿದ್ದೇಶ್ವರ, ಶಾಸಕ ಬಿ.ಪಿ ಹರೀಶ್, ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ, ಮಾಜಿ ಸಚಿವ ಆರ್ ಶಂಕರ್, ಗಡಿನಾಡು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ಮಾಜಿ ಶಾಸಕರಾದ ಎಸ್.ರಾಮಪ್ಪ, ಅರುಣ ಕುಮಾರ ಪೂಜಾರ, ವಿರುಪಾಕ್ಷಪ್ಪ ಬಳ್ಳಾರಿ, ಎಚ್.ಎಸ್ ಶಿವಶಂಕರ್ ಆಗಮಿಸುವರು.
ಈ ಸಂದರ್ಭದಲ್ಲಿ ರಾಣೇಬೆನ್ನೂರು ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರವೀಂದ್ರಗೌಡ ಎಫ್ ಪಾಟೀಲ, ಕೋಡಿಯಾಲ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಕರಿಯಪ್ಪ ಮಾಳಗಿ, ಕೃಷ್ಣೋಜಿ ರಾವ್, ಕುಮಾರ್ ಸ್ವಾಮಿ ಹಿರೇಮಠ್ ಇತರರು ಹಾಜರಿದ್ದರು.