ಸಿರಿಗೆರೆಯ ತರಳಬಾಳು ಬೃಹನ್ಮಠದ ಕಾಯಕ ಯೋಗಿ ಲಿಂ. ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಯವರ 17ನೇ ವರ್ಷದ ಶ್ರದ್ಧಾಂಜಲಿ ಕಾರ್ಯಕ್ರಮವು ಮಠದ ಆವರಣದಲ್ಲಿ ಇಂದು ಬೆಳಿಗ್ಗೆ 6.30ಕ್ಕೆ ನಡೆಯಲಿದೆ.
ಜಗದ್ಗುರು ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದಾವಣಗೆರೆ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಉಪನ್ಯಾಸ ನೀಡುವರು.
ಅಣ್ಣನ ಬಳಗದ ಅಧ್ಯಕ್ಷ ಬಿ.ಎಸ್. ಮರುಳಸಿದ್ದಯ್ಯ ಅಧ್ಯಕ್ಷತ ವಹಿಸುವರು. ಸಿರಿಗೆರೆಯ ಅಕ್ಕನ ಬಳಗದ ಕು. ಬಸಮ್ಮ ಮತ್ತು ಸಂಗಡಿಗರು ವಚನ ಗೀತೆಯನ್ನು ನಡೆಸಿಕೊಡುವರು.