ದಾವಣಗೆರೆ, ಫೆ. 17- ದೇವರು, ಧರ್ಮವನ್ನು ಮುಂದಿಟ್ಟುಕೊಂಡು ನೀಡುವ ಪ್ರಾಣಿ ಹಾಗೂ ಪಶುವಿನ ಬಲಿಯು ಅನಾಗರಿಕ, ಅಂಧಶ್ರದ್ಧೆ, ಪರಿಸರ ಮಾಲಿನ್ಯಕಾರಕ ಮಾತ್ರವಲ್ಲದೇ ಕಾನೂನು ಮತ್ತು ಧರ್ಮ ವಿರೋಧಿಯಾಗಿದೆ ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ, ಬಸವ ಧರ್ಮ ಜ್ಞಾನಪೀಠ ಮತ್ತು ಪಶು, ಪ್ರಾಣಿ ಬಲಿ ನಿರ್ಮೂಲನಾ ಮಹಾಸಂಘದ ಅಧ್ಯಕ್ಷರಾದ ಶ್ರೀ ದಯಾನಂದ ಸ್ವಾಮೀಜಿ ಇಂದಿಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಭಕ್ತಾದಿಗಳು ಪ್ರಾಣಿಬಲಿ ತ್ಯಜಿಸಿ ಅಹಿಂಸಾತ್ಮ ಕವಾಗಿ ಸಾತ್ವಿಕ ಪೂಜೆ ಸಲ್ಲಿಸಬೇಕು. ದೇವಸ್ಥಾನ ಗಳು ಕಸಾಯಿ ಖಾನೆ, ವದಾಲಯಗಳಾಗದೇ ದಿವ್ಯಾಲಯಗಳಾಗಬೇಕು. ಜಾತ್ರೆ, ಪರಿಸರಗಳ ಧಾರ್ಮಿಕ ಸ್ಥಾನಗಳು ಕಟುಕರ ಕೇರಿಗಳಾಗ ಬಾರದು ಜೀವ ತೆಗೆಯುವ ಮೃತ್ಯು ಕೂಪವಾಗ ಬಾರದು. ಪ್ರಾಣಿಹಿಂಸೆ ಮತ್ತು ಮದ್ಯ, ಮಾದಕ ಪದಾರ್ಥಗಳಿಂದ ಮುಕ್ತವಾಗಿರಬೇಕೆಂದರು.
ದೇವಾಲಯಗಳು ಅಹಿಂಸೆ, ಕರುಣೆ, ಪ್ರೇಮ, ಜೀವದಯೆ, ಮಾನ ವೀಯತೆ, ಆಧ್ಯಾ ತ್ಮಿಕತೆ ಮುಂತಾದ ದಿವ್ಯ ಮೌಲ್ಯಗ ಳನ್ನು ಸಾರುವ ಸುಸಂ ಸ್ಕಾರ ನೀಡುವ ದಿವ್ಯ ಧಾಮಗಳಾಗ ಬೇಕು. ಸದ್ಭಕ್ತಿ, ಸುಜ್ಞಾನ ಮತ್ತು ಸದಾಚಾರಗಳ ತ್ರಿವೇಣಿ ಸಂಗಮವಾಗ ಬೇಕು. ಈ ಹಿನ್ನೆಲೆಯಲ್ಲಿ ಭಕ್ತಾದಿಗಳು, ಸಮಾಜ, ದೇವಾಲಯದ ಆಡಳಿತ ಮಂಡಳಿ ಹಾಗೂ ಸರ್ಕಾರ ಮತ್ತು ಸುದ್ಧಿ ಮಾಧ್ಯಮಗಳು ಕಾರ್ಯ ನಿರ್ವಹಿಸಬೇಕು ಎಂದು ಮನವಿ ಮಾಡಿದರು. ಈ ಕುರಿತು ಈಗಾಗಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗೃಹ ಮತ್ತು ಪಶು ಸಂಗೋಪನಾ ಇಲಾಖೆ ಕಾರ್ಯದ ರ್ಶಿಗಳು, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ದಾವಣಗೆರೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದರು.
ಕರ್ನಾಟಕ ಪ್ರಾಣಿ ಬಲಿಗಳ ಪ್ರತಿಬಂಧಕ ಅಧಿನಿಯಮದ ಪ್ರಕಾರ ಶಿಕ್ಷಾರ್ಹ ಅಪರಾದವಾಗಿದೆ. ಈ ಪ್ರಾಣಿ ಬಲಿಯನ್ನು ಸಂಬಂಧಪಟ್ಟ ಇಲಾಖೆಗಳು ಕಾನೂನು ಹಾಗೂ ಹೈಕೋರ್ಟ್ ಆದೇಶಗಳ ಅಡಿಯಲ್ಲಿ ಸಂಪೂರ್ಣವಾಗಿ ತಡೆಗಟ್ಟಬೇಕು. ಪ್ರಾಣಿಗಳನ್ನು ಜಾತ್ರ ಪಾರಿಸರಕ್ಕೆ ಬಾರದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಗೆ ಮನವಿ ಮಾಡಿದರು.
ಕರ್ನಾಟಕ ಗೋವಂಶ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಪ್ರಕಾರ 13 ವರ್ಷದ ಒಳಗಿನ ಎಮ್ಮೆ, ಕೋಣ, ಅವುಗಳ ಕರುಗಳ ಹತ್ಯೆಯು ಶಿಕ್ಷಾರ್ಹ ಅಪರಾಧವಾಗಿದ್ದು, ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರದಿಂದ 10 ಲಕ್ಷ ರೂ.ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಹೇಳಿದರು.