ದಾವಣಗೆರೆ, ಫೆ. 17 – ನಗರದ ಬಾಪೂಜಿ ಡಿಪ್ಲೋಮಾ ಕಾಲೇಜಿನ ಸಿಎಸ್ ವಿಭಾಗದ ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದಿದ್ದು ತಮ್ಮ ಸಂಸತಸವನ್ನು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರೊಂದಿಗೆ ಹಂಚಿಕೊಂಡಿದ್ದಾರೆ.
ಸಂಸದರ ಗೃಹ ಕಚೇರಿಯಲ್ಲಿ ಭೇಟಿಯಾದ ವಿದ್ಯಾರ್ಥಿಗಳು, ತಮ್ಮ ವಿದ್ಯಾಭ್ಯಾಸ ಹಾಗೂ ಸಾಧನೆಗಳ ಕುರಿತು ಸಂಸದರೊಂದಿಗೆ ಮುಕ್ತವಾಗಿ ಮಾತನಾಡಿದರು.
ಅದರಲ್ಲೂ ವಿದ್ಯಾರ್ಥಿಯೊಬ್ಬರು ಈ ಬಾರಿಯ ಪರೀಕ್ಷೆಯಲ್ಲಿ ಶೇ. 98 ರಷ್ಟು ಅಂಕ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಸಂಸದರು, ವಿದ್ಯಾರ್ಥಿಗಳ ಸಾಧನೆ ನಿರಂತರವಾಗಿರಲಿ ಎಂದು ಮಕ್ಕಳಿಗೆ ಶುಭ ಹಾರೈಸಿದರು.