ಕವಿತಾ ಮಿಶ್ರಾಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ

ಕವಿತಾ ಮಿಶ್ರಾಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ

ಬಾಳೆ ಹೊನ್ನೂರು, ಫೆ.19- ಶ್ರೀ ಜಗದ್ಗುರು ರಂಭಾಪುರಿ ವೀರ ಸಿಂಹಾಸನ ಮಹಾಸಂಸ್ಥಾನ ಪೀಠದ ವತಿಯಿಂದ ಪ್ರತಿ ವರ್ಷ ಕೊಡ ಮಾಡುವ `ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ’ಗೆ  ಈ ಬಾರಿ ರಾಯಚೂರು ಜಿಲ್ಲೆ ಕವಿತಾಳ ಗ್ರಾಮದ,
ಕೃಷಿಯಲ್ಲಿ ವಿಶೇಷ ಸಾಧನೆಗೈದ ಮಹಿಳೆ ಡಾ.ಕವಿತಾ ಮಿಶ್ರಾ  ಅವರು ಭಾಜನರಾಗಿದ್ದಾರೆ.

ಬರುವ ಮಾರ್ಚ್ 11ರಿಂದ 14ರವರೆಗೆ ಕ್ಷೇತ್ರದಲ್ಲಿ ಶ್ರೀ ವೀರಭದ್ರಸ್ವಾಮಿ ರಥೋತ್ಸವದ ಅಂಗವಾಗಿ ಜರುಗುವ ಕಾರ್ಯಕ್ರಮದಲ್ಲಿ ಕವಿತಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ರಂಭಾಪುರಿ ಪೀಠದ ಪ್ರಕಟಣೆ ತಿಳಿಸಿದೆ.

error: Content is protected !!