ನಾಳೆ ಶ್ರೀ ತೋಂಟದ ಸಿದ್ದಲಿಂಗ ಶ್ರೀಗಳ ಜಯಂತಿ

ನಾಳೆ ಶ್ರೀ ತೋಂಟದ ಸಿದ್ದಲಿಂಗ ಶ್ರೀಗಳ ಜಯಂತಿ

ಗದಗ, ಫೆ.19- ಇಲ್ಲಿನ ಶ್ರೀ ತೋಂಟದಾರ್ಯ ಮಠದ ಲಿಂ. ಶ್ರೀ ಡಾ. ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳವರ 76ನೇ ಜಯಂತಿ ಅಂಗವಾಗಿ ಭಾವೈಕ್ಯತಾ ದಿನಾಚರಣೆ, ಪೂಜ್ಯ ಶ್ರೀಗಳ ಕುರಿತು ಗ್ರಂಥಗಳ ಬಿಡುಗಡೆ ಸಮಾರಂಭವು ನಾಡಿದ್ದು ದಿನಾಂಕ 21ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಗದುಗಿನ ಶ್ರೀ ತೋಂಟದಾರ್ಯ ಮಠದಲ್ಲಿ ನಡೆಯಲಿದೆ.

ಶ್ರೀ ಜಗದ್ಗುರು ಡಾ. ತೋಂಟದ ಸಿದ್ದರಾಮ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸಚಿವ ಹೆಚ್.ಕೆ. ಪಾಟೀಲ್ ಅಧ್ಯಕ್ಷತೆ ವಹಿಸುವರು. ಸಭಾಪತಿ ಬಸವರಾಜ ಹೊರಟ್ಟಿ, ಶ್ರೀ ನಿಜಗುಣ ಪ್ರಭು ತೋಂಟದಾರ್ಯ ಸ್ವಾಮೀಜಿ ಸೇರಿದಂತೆ, ಅನೆಕ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

error: Content is protected !!