ದಾವಣಗೆರೆ, ಫೆ.19- ಅಪ್ರಾಪ್ತ ಬಾಲಕ ಬೈಕ್ ಚಲಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನ್ಯಾಯಾಲಯವು ಬೈಕ್ ಮಾಲೀಕರಿಗೆ 25 ಸಾವಿರ ದಂಡ ವಿಧಿಸಿದೆ.
ನಗರದ ಗಡಿಯಾರ ಕಂಬದ ರಸ್ತೆಯಲ್ಲಿ ಫೆ.17ರಂದು ಉತ್ತರ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಜಯಶೀಲ ಮತ್ತು ಸಿಬ್ಬಂದಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಅಪ್ರಾಪ್ತ ಬಾಲಕ ಆಕ್ಟಿವ್ ಹೊಂಡಾ ಸ್ಕೂಟಿ ಚಲಾಯಿಸಿದ ಘಟನೆ ಬೆಳಕಿಗೆ ಬಂದಿದೆ.
ಮಮತಾ ಅವರಿಗೆ ಸೇರಿದ ಆಕ್ವಿವ್ ಹೊಂಡಾ ಸ್ಕೂಟಿಯನ್ನು ವಶಕ್ಕೆ ಪಡೆದು ದಕ್ಷಿಣ ಸಂಚಾರ ಠಾಣೆಯಲ್ಲಿ ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿ ಪ್ರಕರಣ ದಾಖಲಿಸಿ, ಸ್ಕೂಟಿ ಮಾಲೀಕರ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಈ ಕುರಿತು ಪಿಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ದಂಡ ವಿಧಿಸಿ, ಅಪ್ರಾಪ್ತರ ಕೈಗೆ ವಾಹನ ಕೊಡದಂತೆ ಎಚ್ಚರಿಕೆ ನೀಡಿದ್ದಾರೆ.