ದಾವಣಗೆರೆ, ಫೆ.20- ಹೆಜ್ಜೇನು ದಾಳಿಯಿಂದ ರೈತನೊಬ್ಬ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಹುಚ್ಚವ್ವನಹಳ್ಳಿ ಗ್ರಾಮ ದಲ್ಲಿ ಗುರುವಾರ ನಡೆದಿದೆ. ರೈತ ನಾಗಪ್ಪ (65) ಹೆಜ್ಜೇನು ದಾಳಿಗೆ ಮೃತಪಟ್ಟ ರೈತ. ಎಂದಿನಂತೆ ಬೆಳಗ್ಗೆ ಜಮೀನಿಗೆ ತೆರಳುತ್ತಿದ್ದಾಗ ಏಕಾಏಕಿ ಹೆಜ್ಜೇನು ಹುಳುಗಳು ದಾಳಿ ನಡೆಸಿವೆ. ಅಸ್ವಸ್ಥಗೊಂಡಿದ್ದ ರೈತನನ್ನು ಕೂಡಲೇ ದಾವಣಗೆರೆಯ ಬಾಪೂಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ರೈತ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಜ್ಜೇನು ದಾಳಿಗೆ ರೈತನ ಸಾವು
