ಹರಿಹರ, ಫೆ. 21 – ನಗರದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ, ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಿಸಲಾಯಿತು.
ತಹಶೀಲ್ದಾರ್ ಗುರುಬಸವರಾಜ್, ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಶಿವಾಜಿ ಮಹಾರಾಜರ ಶೌರ್ಯ, ಧೈರ್ಯ ಸಾಹಸ ಮತ್ತು ಆದರ್ಶದ ಗುಣಗಳನ್ನು ಇಂದಿನ ಯುವಕರು ಮೈಗೂಡಿಸಿಕೊಂಡು ದೇಶದ ರಕ್ಷಣೆ ಮಾಡುವ ನಿಟ್ಟಿನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ದೇಶ ಪ್ರೇಮವನ್ನು ಬೆಳೆಸಿಕೊಳ್ಳವಂತಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.