ಹರಿಹರ, ಫೆ.24- ಸ್ನೇಹ ಸಂಭ್ರಮ ಗೆಳೆಯರ ಬಳಗದ ವತಿಯಿಂದ ತಾಲ್ಲೂಕಿನ ಭಾನುವಳ್ಳಿ ಗ್ರಾಮದಲ್ಲಿ ಜಿ. ಮಲ್ಲಿಕಾರ್ಜುನಪ್ಪ ಮತ್ತು ಹಾಲಮ್ಮ ಚಾರಿಟಿ ಫೌಂಡೇಶನ್ ಸಹಯೋಗದಲ್ಲಿ ಉದ್ಯೋಗ ಮೇಳ ಯಶಸ್ವಿಯಾಗಿ ನಡೆಯಿತು.
ಭಾನುವಳ್ಳಿ ಸುತ್ತಮುತ್ತಲಿನ 25ಕ್ಕೂ ಅಧಿಕ ಗ್ರಾಮದ 856 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದರು. ಈ ವೇಳೆ 511 ಯುವಕರಿಗೆ ಉದ್ಯೋಗ ನೇಮಕಾತಿ ಪತ್ರ ನೀಡಲಾಯಿತು.
ಹಳ್ಳಿಗಳಲ್ಲಿ ಉದ್ಯೋಗ ಮೇಳ ಮಾಡುವುದು ಅತಿ ವಿರಳ. ಇಂತಹ ಸಾಮಾಜಿಕ ಕಾರ್ಯಕ್ಕೆ ಮುಂದಾದ ಸ್ನೇಹ ಸಂಭ್ರಮ ಗೆಳೆಯರ ಬಳಗದ ಕಾರ್ಯ ಶ್ಲ್ಯಾಘನೀಯ. ಜಿ.ಮಲ್ಲಿಕಾರ್ಜುನಪ್ಪ ಮತ್ತು ಹಾಲಮ್ಮ ಚಾರಿಟಿ ಫೌಂಡೇಶನ್ ವತಿಯಿಂದ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಉದ್ಯೋಗಾವಕಾಶ, ಆರೋಗ್ಯ ಸುಧಾರಣೆ ಹಾಗೂ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಕಾರ್ಯಕ್ರಮ ನೀಡಲಿದೆ ಎಂದು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.
ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಂಸದ ಬಿ.ವಿ ನಾಯಕ್, ಶಾಸಕ ಬಿ.ಪಿ ಹರೀಶ್, ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ವೀರೇಶ್ ಹನಗವಾಡಿ, ಟಿ.ಆರ್. ತೇಜಸ್ವಿ ಕಟ್ಟಿಮನಿ, ಗ್ರಾಮದ ಮುಖಂಡ ಶಂಕರ ಗೌಡ್ರು, ಸ್ನೇಹ ಸಂಭ್ರಮ ಗೆಳೆಯರ ಬಳಗದ ಪದಾಧಿಕಾರಿಗಳು ಇದ್ದರು.