ಶಾಸಕರಿಂದ ಕಾಮಗಾರಿಗೆ ಭೂಮಿ ಪೂಜೆ

ಶಾಸಕರಿಂದ ಕಾಮಗಾರಿಗೆ ಭೂಮಿ ಪೂಜೆ

ಹರಪನಹಳ್ಳಿ, ಮಾ.2- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ತಾಲ್ಲೂಕಿನ ಕಡಬಗೆರೆ, ಮಾಡ್ಲಲಗೆರೆ ಮತ್ತು ನಿಚ್ಚವ್ವನಹಳ್ಳಿ ಗ್ರಾಮಗಳಲ್ಲಿ ತಲಾ 60 ಲಕ್ಷ ರೂ.ಗಳಲ್ಲಿ ಮಂಜೂರಾದ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ನೂತನ ಕಟ್ಟಡ ನಿರ್ಮಾಣದ ಭೂಮಿ ಪೂಜೆ ಕಾರ್ಯವನ್ನು ಶಾಸಕರಾದ ಎಂ.ಪಿ. ಲತಾ ಮಲ್ಲಿಕಾರ್ಜುನ್‌ ನೆರವೇರಿಸಿದರು.

ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಬೇರಪ್ಪ ಮತ್ತು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

error: Content is protected !!