ವಚನಾಮೃತ ಬಳಗ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಇವರ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಭಗವಾನ್ ಮಹಾವೀರ ಗೋಶಾಲೆಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಸೌಮ್ಯ ಸತೀಶ್ ಧಾರವಾಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಡಾ. ಅನಿತಾ ಹೆಚ್. ದೊಡ್ಡಗೌಡರ್ ದತ್ತಿ ಉಪನ್ಯಾಸ ನೀಡಲಿದ್ದಾರೆ. ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿರುವರು. ಆಂಜನೇಯ ಬಡಾವಣೆ ಎಂ. ಪರಮೇಶ್ವರಪ್ಪ ಸಿರಿಗೆರೆ ಇವರು ಲಿಂ. ಸಿದ್ದಮ್ಮ ಮತ್ತು ಲಿಂ. ಮರುಳಸಿದ್ದಪ್ಪ ಸಿರಿಗೆರೆ ಇವರು ದತ್ತಿ ದಾನಿಗಳಾಗಿದ್ದಾರೆ.
ವಚನಾಮೃತ ಬಳಗದಿಂದ ಇಂದು ಮಹಿಳಾ ದಿನಾಚರಣೆ, ಉಪನ್ಯಾಸ
