ದಾವಣಗೆರೆ, ಮಾ.21- ದೆಹಲಿಯ ಅಮಿತಿ ವಿಶ್ವವಿದ್ಯಾನಿಲಯದಲ್ಲಿ ನಡೆದ 38ನೇ ಇಂಟರ್ ಯುನಿವರ್ಸಿಟಿ ನ್ಯಾಷನಲ್ ಯೂತ್ ಫೆಸ್ಟಿವಲ್‌ನಲ್ಲಿ ದೃಶ್ಯ ಕಲಾ ಮಹಾವಿದ್ಯಾಲಯದ ಮಕ್ಕಳು ಉತ್ತಮ ಸಾಧನೆ ಮಾಡಿದ್ದಾರೆ.
ಪೋಸ್ಟರ್ ರಚನಾ ಸ್ಪರ್ಧೆಯಲ್ಲಿ ಅನ್ವಯಿಕ ಕಲಾ ವಿಭಾಗದ ವಿದ್ಯಾರ್ಥಿ ಸಿದ್ದಪ್ಪ ಕರಡಿ (ಪ್ರಥಮ), ಕ್ಲೇ ಮಾಡಲಿಂಗ್‌ನಲ್ಲಿ ಶಿಲ್ಪ ಕಲಾ ವಿದ್ಯಾರ್ಥಿ ವಿನೋದ್ (ತೃತೀಯ) ಸ್ಥಾನ ಗಳಿಸುವ ಮೂಲಕ ಜಿಲ್ಲೆ ಹಾಗೂ ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ದಾವಣಗೆರೆ ವಿವಿ ಕುಲಪತಿ ಪ್ರೊ. ಬಿ. ಡಿ. ಕುಂಬಾರ, ದೃಶ್ಯ ಕಲಾ ಮಹಾ ವಿದ್ಯಾಲಯದ ಪ್ರಾಚಾರ್ಯ ಡಾ. ಜೈರಾಜ್ ಎಂ. ಚಿಕ್ಕ ಪಾಟೀಲ್ ಸೇರಿದಂತೆ ಕಾಲೇಜಿನ ಸಿಬ್ಬಂದಿ ಈ ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿಸಿದ್ದಾರೆ.