ದಾವಣಗೆರೆ, ಮಾ. 21- ಬೆಂಗಳೂರಿನ ಕನ್ನಡ ಫಿಲಂ ಚೇಂಬರ್ ಸಂಸ್ಥೆ ವತಿಯಿಂದ ಸಮಾಜದಲ್ಲಿ ತಮ್ಮದೇ ಆದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಾಗೂ ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ರಾಜ್ಯಮಟ್ಟದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಾಡಿದ್ದು ದಿನಾಂಕ 23ರ ಭಾನುವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ.
ಈ ಸಂದರ್ಭದಲ್ಲಿ ನಗರದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಅಧ್ಯಾತ್ಮಿಕ ಸಂಸ್ಥೆಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಎಂ. ಬಸವರಾಜ್ ಅವರಿಗೆ ಆದರ್ಶ ಶಿಲ್ಪಿ ಪ್ರಶಸ್ತಿ, ಜೆಜೆಎಂ ವೈದ್ಯಕೀಯ ಮಹಾವಿದ್ಯಾಲಯದ ಪ್ರಯೋಗ ಶಾಲಾ ತಂತ್ರಜ್ಞ ಅಣಬೇರು ತಾರೇಶ್ ಕೆ.ಪಿ. ಅವರಿಗೆ ವೈದ್ಯಕೀಯ ಸೇವಾರತ್ನ ಪ್ರಶಸ್ತಿ, ವ್ಯಾಪಾರ – ಭಾರತೀಯ ಜೀವವಿಮಾ ಪ್ರತಿನಿಧಿ ಕೆ.ಎಸ್. ವೀರಭದ್ರಪ್ಪ ಹಾಗೂ ಸಿಟಿ ಸೆಂಟ್ರಲ್ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಿ.ಎಂ.ಜಿ. ವೀರೇಶ್ ಅವರುಗಳಿಗೆ ಸಮಾಜ ಸೇವಾರತ್ನ ಪ್ರಶಸ್ತಿ, ಹಾಗೂ ಕಥೆ, ಕವನ ಸಂಕಲನ ಹಾಗೂ ಕಥಾ ಸಂಕಲನಕಾರರಾದ ಫಕೀರೇಶ್ ಆದಾಪುರ ಅವರಿಗೆ ಕಲಾ ಸೇವಾರತ್ನ ಪ್ರಶಸ್ತಿ ನೀಡಲಾಗುತ್ತದೆ.