ದಾವಣಗೆರೆ,ಏ.3- ಸಮಾಜ ಸೇವಕ ಸಿ.ಆರ್. ನಸೀರ್ ಅಹಮದ್ ಕಾಂಗ್ರೆಸ್ ತೊರೆದು ಸಂಸದ ಜಿ.ಎಂ.ಸಿದ್ದೇಶ್ವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಶಾಸಕ ಎಸ್.ಎ.ರವೀಂದ್ರನಾಥ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ದೂಡಾ ಅಧ್ಯಕ್ಷ ದೇವರಮನೆ ಶಿವಕುಮಾರ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಮುಖಂಡ ಜಯಪ್ರಕಾಶ್ ಕೊಂಡಜ್ಜಿ ಹಾಗೂ ಇತರರು ಉಪಸ್ಥಿತರಿದ್ದರು.
December 26, 2024