ಮೃತ ನವೀನ್ ಕುಟುಂಬಕ್ಕೆ ಸಂಸದ ಜಿ.ಎಂ.ಸಿದ್ದೇಶ್ವರ ಸಾಂತ್ವನ

ದಾವಣಗೆರೆ, ಮಾ.2- ಯುಕ್ರೇನ್‌ನಲ್ಲಿ ನಡೆದ ಶೆಲ್ ದಾಳಿಯಲ್ಲಿ ಮೃತಪಟ್ಟ ರಾಣೇಬೆನ್ನೂರು ತಾಲ್ಲೂಕು ಚಳಗೇರಿ ಗ್ರಾಮದ ವಿದ್ಯಾರ್ಥಿ ನವೀನ್ ಶೇಖರಪ್ಪ ಗ್ಯಾನಗೌಡರ್ ಅವರ ನಿವಾಸಕ್ಕೆ ಸಂಸದ  ಜಿ.ಎಂ.ಸಿದ್ದೇಶ್ವರ ಅವರು ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನವೀನ್ ಭಾವಚಿತ್ರಕ್ಕೆ ಸಂಸದರು ಪುಷ್ಪಾರ್ಚನೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಿದರು.  

ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಪಿ.ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ದೂಡಾ ಅಧ್ಯಕ್ಷ ದೇವರಮನೆ ಶಿವಕುಮಾರ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ಎಸ್.ಜಗದೀಶ್ ಹಾಗೂ ಇತರರು ಉಪಸ್ಥಿತರಿದ್ದರು.

error: Content is protected !!