ದಾವಣಗೆರೆ, ಮಾ.13 – ನಗರದ ಶತಮಾನದ ಶಾಲೆಯಾದ ಹಳೇ ಪೇಟೆಯ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸಿ.ಆರ್.ಅನುಷ ಅವರಿಗೆ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ಸ್ಕಾಲರ್‍ಶಿಪ್ (ಎನ್.ಎಂ.ಎಂ.ಎಸ್) ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಶಾಲೆಯ ಇಂಗ್ಲಿಷ್ ಶಿಕ್ಷಕಿ ಎನ್.ಎಂ.ನಮಿತಾ, ವಿಶೇಷವಾಗಿ ಆಸಕ್ತಿ ವಹಿಸಿ ಅತ್ಯುತ್ತಮವಾಗಿ ಬೋಧನೆ ಮತ್ತು ತರಬೇತಿ ನೀಡಿ ಮಕ್ಕಳಿಗೆ ಪರೀಕ್ಷೆಗೆ ಸಿದ್ದಗೊಳಿಸಿದ್ದರು.
ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಪುರಸ್ಕಾರಕ್ಕೆ ಪಾತ್ರಳಾಗಿ, ಶಾಲೆಗೆ ಮತ್ತು ಶಿಕ್ಷಕರಿಗೆ ಕೀರ್ತಿ ತಂದಿರುವ ಸಿ.ಆರ್.ಅನುಷಾಗೆ ಶಾಲೆಯ ಮುಖ್ಯೋಪಾಧ್ಯಾಯಿನಿ ಶೋಭ ಕೆ.ಎಂ, ನಮಿತಾ ಎನ್.ಎಂ., ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಅಂಬಣ್ಣ, ಶಾಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು, ಎಸ್‍ಡಿಎಂಸಿ ಅಧ್ಯಕ್ಷರು ವಿದ್ಯಾರ್ಥಿನಿಗೆ ಅಭಿನಂದಿಸಿದ್ದಾರೆ.