ದುರ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದ ಜಿ.ಎಂ. ಸಿದ್ದೇಶ್ವರ

ದಾವಣಗೆರೆ, ಮಾ.13- ನಗರ ದೇವತೆ ಶ್ರೀ ದುರ್ಗಾಂಬಿಕ ದೇವಿಯ ಜಾತ್ರೆಯ ಅಂಗವಾಗಿ ಸಂಸದ  ಜಿ.ಎಂ.ಸಿದ್ದೇಶ್ವರ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಗಾಯತ್ರಿ ಸಿದ್ದೇಶ್ವರ ದಂಪತಿ ನಿನ್ನೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಜಯಮ್ಮ ಗೋಪಿನಾಯ್ಕ್, ಉಪ ಮಹಾಪೌರರಾದ ಶ್ರೀಮತಿ ಗಾಯತ್ರಿಬಾಯಿ ಖಂಡೋಜಿರಾವ್, ದೂಡಾ ಅಧ್ಯಕ್ಷ ದೇವರಮನೆ ಶಿವಕುಮಾರ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಸಂಸದರ ಸಹೋದರ ಪುತ್ರ ಜಿ.ಎಲ್. ರಾಜೀವ್ ಮತ್ತು ಇತರರು ಉಪಸ್ಥಿತರಿದ್ದರು.

error: Content is protected !!