ಬಿಎಸ್‌ವೈ ಸರ್ಕಾರಕ್ಕೆ ಅಮಿತ ಮೆಚ್ಚುಗೆ

ಮೋದಿ ಸರ್ಕಾರದಂತೆ ರಾಜ್ಯ ಸರ್ಕಾರದ ಆಡಳಿತವೂ ಜನಪರ ಎಂದ ಷಾ

ಬೆಳಗಾವಿ, ಜ. 17 –  ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಂತೆ ರಾಜ್ಯದಲ್ಲಿ ಯಡಿಯೂರಪ್ಪ ಆಡಳಿತ ಕೂಡ ಜನಪರವಾಗಿದೆ. ಕೊರೊನಾ ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ನಂತರ ಭುಗಿಲೆದ್ದಿರುವ ಅಸಮಾಧಾನ, ನಾಯಕತ್ವದ ಬಗೆಗಿನ ಅಪಸ್ವರದ ನಡುವೆ, ಯಡಿಯೂರಪ್ಪ ಸರ್ಕಾರವನ್ನು ಅಮಿತ್ ಷಾ ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಕೊರೊನಾ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಾಗಿದೆ.  ಜಗತ್ತಿನ ಇತರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ಮರಣ ಪ್ರಮಾಣ ನಿಯಂತ್ರಣ ಸಾಧ್ಯವಾಗಿದೆ. ಯಡಿಯೂರಪ್ಪ ನೇತೃತ್ವದ ಸರ್ಕಾರ ಕೂಡ ಕೊರೊನಾ ವಿರುದ್ಧ ಸಮರ್ಥವಾಗಿ ಹೋರಾಟ ನಡೆಸುವ ಮೂಲಕ ಸೋಂಕು ನಿಯಂತ್ರಣದಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯ್ತಿಯ ಒಟ್ಟು ಸದಸ್ಯರಲ್ಲಿ ಶೇ.55 ಕ್ಕೂ ಅಧಿಕ ಸದಸ್ಯರು ಪಕ್ಷದ ಕಾರ್ಯಕರ್ತರಾಗಿದ್ದಾರೆ. ರಾಜ್ಯದ ಜನರು ಎಲ್ಲ ಚುನಾವಣೆಗಳಲ್ಲಿ ಪಕ್ಷವನ್ನು ಗೆಲ್ಲಿಸುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈಬಲಪಡಿಸಿದ್ದೀರಿ ಎಂದವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಎದುರಾಗಲಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾ ವಣೆ ಯಲ್ಲಿ ಉತ್ತಮ ಸಾಧನೆ ಮಾಡಬೇಕು. ಶೇ. 75ಕ್ಕಿಂತಲೂ ಹೆಚ್ಚು ಸ್ಥಾನಗಳಲ್ಲಿ
ಗೆಲುವು ಸಾಧಿಸಬೇಕು ಎಂದೂ ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಜೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ, ಸಚಿವ ಉಮೇಶ್ ಕತ್ತಿ ಇತರರಿದ್ದರು.

error: Content is protected !!