ಅಭಿವೃದ್ಧಿ ಯೋಜನೆಗಳಿಗೆ ಮುಖ್ಯಮಂತ್ರಿಗಳಿಂದ ಶೀಘ್ರ ಚಾಲನೆ

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಮೀಸಲಾತಿ ಬಂದ ನಂತರದಲ್ಲಿ ಬದಲಾವಣೆಯಾಗಿ ಸುಮಾರು 17 ಗ್ರಾ.ಪಂ.ಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಮುಂದಿನ ದಿನಗಳಲ್ಲಿ ಚುನಾವಣೆ ಎದುರಾಗುವ ಕ್ಷೇತ್ರ ವ್ಯಾಪ್ತಿಯ 23 ತಾಲ್ಲೂಕು ಪಂಚಾಯಿತಿ ಸ್ಥಾನಗಳು ಹಾಗೂ 4 ಜಿಲ್ಲಾ ಪಂಚಾಯಿತಿಯ ಸ್ಥಾನಗಳಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ.

– ಅರುಣಕುಮಾರ ಪೂಜಾರ,  ಶಾಸಕರು, ರಾಣೇಬೆನ್ನೂರು

ರಾಣೇಬೆನ್ನೂರು, ಫೆ.7- ನಗರದಲ್ಲಿ ಹಮ್ಮಿಕೊಂಡಿ ರುವ ದಿನದ 24 ಗಂಟೆ ಕುಡಿಯುವ ನೀರು ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶೀಘ್ರ ದಲ್ಲಿಯೇ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಶಾಸಕ ಅರುಣಕುಮಾರ ಪೂಜಾರ್ ಹೇಳಿದ್ದಾರೆ.

ತಾಲ್ಲೂಕಿನ ತುಮ್ಮಿನಕಟ್ಟಿ, ಮೆಣಸಿನಹಾಳ, ಲಿಂಗದಹಳ್ಳಿ ಸೇರಿದಂತೆ ವಿವಿಧ ಗ್ರಾಮದಲ್ಲಿ ಲೋಕೋ ಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆಯಿಂದ ಇಂದು ಹಮ್ಮಿಕೊಂಡಿದ್ದ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಅಮೃತಸಿಟಿ ಯೋಜನೆಯಲ್ಲಿ ಹಮ್ಮಿಕೊಂಡಿರುವ ನಿರಂತರ ಕುಡಿಯುವ ನೀರಿನ ಯೋಜನೆ ಬಹುತೇಕ ಪೂರ್ಣಗೊಂಡಿದೆ. ಎಪಿಎಂಸಿಯಲ್ಲಿ ನಿರ್ಮಾಣವಾದ ಸಮುದಾಯ ಭವನ, ಚಳಗೇರಿ, ಕರೂರ ಗ್ರಾಮದ ಕೆರೆ ತುಂಬಿಸುವ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವರು ಎಂದರು.

ಈಗಾಗಲೇ 7.86 ಕೋಟಿ ರೂ. ವೆಚ್ಚದಲ್ಲಿ ಎರಡು ದಿನಗಳಿಂದ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗ ಳಿಗೆ ಚಾಲನೆ ನೀಡಲಾಗಿದೆ. ಮೆಣಸಿನಹಾಳ ಸೇರಿದಂತೆ ವಿವಿಧ ಗ್ರಾಮಗಳ ರೈತರಿಗೆ ಅನುಕೂಲವಾಗುವ ಉದ್ದೇಶ ದಿಂದ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂಬುದು ರೈತರ ಒತ್ತಾಯವಾಗಿದ್ದು, ಈಗಾಗಲೇ ಯೋಜನೆಗೆ ಬೇಕಾದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸ ಲಾಗಿದೆ. ಆದಷ್ಟು ಬೇಗ ಅನುದಾನ ದೊರೆಯಲಿದೆ. ಇನ್ನು ತುಮ್ಮಿನಕಟ್ಟಿ ಗ್ರಾಮದಲ್ಲಿಯೇ 1 ಕೋಟಿ ರೂ. ವೆಚ್ಚದಲ್ಲಿ ಆರ್‍ಡಿಪಿಆರ್ ಯೋಜನೆಯ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ (ಪಿಎಂಎಸ್‍ವೈ)ಯಲ್ಲಿ ತಾಲ್ಲೂಕಿನಲ್ಲಿ 17 ಕೋಟಿ ರೂ. ವೆಚ್ಚದಲ್ಲಿ ವಿವಿಧ ಭಾಗಗಳಲ್ಲಿ ರಸ್ತೆ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕ ಸಂತೋಷ್‌ಕುಮಾರ್‌ ಪಾಟೀಲ್, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಬಸವರಾಜ ಕೇಲಗಾರ, ಬಿಜೆಪಿ ಮುಖಂಡರಾದ ಮಂಜಯ್ಯ ಚಾವಡಿ, ನಗರಸಭೆ ಸದಸ್ಯ ಪ್ರಕಾಶ ಪೂಜಾರ್ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

error: Content is protected !!