ಹರಪನಹಳ್ಳಿ, ಜು.2- ಕೊರೊನಾ ಸೋಂಕು ಇಳಿಮುಖ ವಾಗುತ್ತಿದ್ದಂತೆ ಲಾಕ್‍ಡೌನ್ ಸಡಿಲಿಕೆಗೊಳಿಸಿದ ಪರಿಣಾಮ ಸಾರ್ವಜನಿಕರು ಮಾಸ್ಕ್ ಮರೆತು ರಸ್ತೆಯಲ್ಲಿ ಬೇಕಾಬಿಟ್ಟಿ ಸಂಚರಿಸುತ್ತಿದ್ದ ದೃಶ್ಯ ಕಂಡು ಸ್ವತಃ ತಹಶೀಲ್ದಾರ್ ಎಲ್.ಎಂ. ನಂದೀಶ್ ಅವರೇ ಲಾಟಿ ಹಿಡಿದು ರಸ್ತೆಗೆ ಇಳಿದು ಮಾಸ್ಕ್ ಧರಿಸದ ವಾಹನ ಸವಾರರಿಗೆ ಹಾಗೂ ಅಂಗಡಿ ಮಾಲೀಕರಿಗೆ ದಂಡ ವಿಧಿಸಿದರು. ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಬಿ.ಆರ್. ನಾಗರಾಜ್ ನಾಯ್ಕ, ಹಿರಿಯ ಆರೋಗ್ಯ ನಿರೀಕ್ಷಕ ಬಿ. ಮಂಜುನಾಥ್, ಎಎಸ್‍ಐ ಜಾತಪ್ಪ, ತಾಲ್ಲೂಕು ಬಿಜೆಪಿ ಉಪಾಧ್ಯಕ್ಷ ನಿಟ್ಟೂರು ಸಣ್ಣ ಹಾಲಪ್ಪ ಸೇರಿದಂತೆ ಇನ್ನಿತರರಿದ್ದರು.
December 27, 2024