ಮಲೇಬೆನ್ನೂರು, ಜು.5- ಲಾಕ್ಡೌನ್ ತೆರವುಗೊಳಿಸಿ ರುವ ರಾಜ್ಯ ಸರ್ಕಾರ ದೇವಸ್ಥಾನಗಳ ಬಾಗಿಲು ತೆರೆದು ಭಕ್ತರಿಗೆ ದೇವರ ದರ್ಶನ ಮಾಡಲು ಸೋಮವಾರದಿಂದ ಅವಕಾಶ ಮಾಡಿಕೊಟ್ಟಿದೆ.
ಈ ಹಿನ್ನೆಲೆಯಲ್ಲಿ ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ದೇವಸ್ಥಾನದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಭಕ್ತರು ಅಜ್ಜಯ್ಯನ ಗದ್ದುಗೆ ದರ್ಶನ ಮಾಡಿದರು. ಪ್ರಸಾದ ಹಾಗೂ ಕೊಠಡಿ ಸೌಲಭ್ಯಗಳ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಕಾರ್ಯದರ್ಶಿ ಸುರೇಶ್ ತಿಳಿಸಿದ್ದಾರೆ.
ಕೊಕ್ಕನೂರಿನಲ್ಲಿ ಆಂಜನೇಯ ಸ್ವಾಮಿ, ಕೊಮಾರನಹಳ್ಳಿಯ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿ ದೇವಸ್ಥಾನದಲ್ಲೂ ಸೋಮವಾರ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿತ್ತು.