ವಿದ್ಯಾರ್ಥಿ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

ದಾವಣಗೆರೆ, ಮಾ.1- ಸರ್ಕಾರಗಳು ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದಾಗಿ ಆರೋಪಿಸಿ ನಗರದಲ್ಲಿಂದು ಭಾರತ ವಿದ್ಯಾರ್ಥಿ ಫೆಡರೆಷನ್ (ಎಸ್ಎಫ್ಐ) ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬಿಎಸ್ಎನ್ಎಲ್ ಕಛೇರಿ ಬಳಿಯಿಂದ ಜಿಲ್ಲಾಧಿಕಾರಿಯವರ ಕಛೇರಿಯವರೆಗೆ ಪ್ರತಿಭಟನಾ ರಾಲಿ ನಡೆಸಿದ ಸಂಘಟನೆಯ ಮುಖಂಡರು, ನಂತರ ಜಿಲ್ಲಾಡಳಿತದ ಮುಖೇನ ಸಮಾಜ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಿದರು.

2018-19 ಸಾಲಿನಲ್ಲಿ ಪ್ಯಾರಾ ಮೆಡಿಕಲ್ ನರ್ಸಿಂಗ್ ಓದುತ್ತಿರುವ ವಿದ್ಯಾರ್ಥಿಗಳಿಗೆ ಭಾರತ ಸರ್ಕಾರದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನದ ಪರಿಷ್ಕೃತ ಮಾರ್ಗಸೂಚಿಯನ್ವಯ 2018-19ನೇ ಸಾಲಿನಿಂದ ಮ್ಯಾನೇಜ್ ಮೆಂಟ್ ಕೋಟಾದಡಿಯಲ್ಲಿ ಆಯ್ಕೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳ ಕಾಲೇಜು ಶುಲ್ಕಗಳನ್ನು ಪಾವತಿಸಬಾರದೆಂದು ಆದೇಶಿಸಿದೆ. ಹೊಸ ಆದೇಶ ಪ್ಯಾರಾ ಮೆಡಿಕಲ್ ನರ್ಸಿಂಗ್ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡ, ಓಬಿಸಿ ವಿದ್ಯಾರ್ಥಿಗಳಿಗೆ ಮರಣ ಶಾಸನ ವಾಗಿದೆ. ಸರ್ಕಾರ ಈ ಕೂಡಲೇ ಆದೇಶವನ್ನು ಹಿಂಪಡೆದು ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಒಂದು ವೇಳೆ ಸರ್ಕಾರ ತನ್ನ ಆದೇಶವನ್ನು ಹಿಂಪಡೆಯದಿದ್ದರೆ ಸಂಘಟನೆ ರಾಜ್ಯಾದ್ಯಂತ ಹೋರಾಟ ಮಾಡುವಂತೆ ಎಚ್ಚರಿಸಿದರು.‌

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಸಂ ಚಾಲಕ ಲಕ್ಷ್ಮಣ್ ರಾಮಾವತ್, ಮುಖಂಡರುಗ ಳಾದ ಕೆ.ಹೆಚ್. ಆನಂದರಾಜು, ಅನಂತರಾಜ, ಸಲಾವುದ್ದಿನ್ ಸಲ್ಲಾ, ರಾಕೇಶ್, ಪಾಂಡುರಂಗ, ಶ್ರೀಧರ್ ಸೇರಿದಂತೆ ಇತರರು ಭಾಗವಹಿಸಿದ್ದರು.

error: Content is protected !!