ಹರಿಹರ, ಜು.19- ತಾಲ್ಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕುಳಿತ 3127 ವಿದ್ಯಾರ್ಥಿಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಹರಿಹರ ನಗರದಲ್ಲಿ 6 ಗ್ರಾಮೀಣ ಪ್ರದೇಶಗಳಲ್ಲಿ 9 ಮತ್ತು ಮಲೇಬೆನ್ನೂರು ಪಟ್ಟಣದಲ್ಲಿ 2 ಪರೀಕ್ಷಾ ಕೇಂದ್ರಗಳು ಸೇರಿದಂತೆ ತಾಲ್ಲೂಕಿನ ಒಟ್ಟು 17 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಯಿತು.
ಪರೀಕ್ಷಾ ಕೇಂದ್ರಗಳಿಗೆ ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ. ಸಿದ್ದಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಜಿ.ಪಂ. ಕಾರ್ಯನಿರ್ವಾಣಾಧಿಕಾರಿ ವಿಜಯ ಮಹಾಂತೇಶ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದರು.
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಖಜಾಂಚಿ ಶಿವಮೂರ್ತಿ, ತಾಲ್ಲೂಕು ಆಡಳಿತದ ಸಮೀರ್, ಕಿರಣ್ ಇತರರು ಹಾಜರಿದ್ದರು.