ಹರಪನಹಳ್ಳಿ, ಏ.27- ಅರಸೀಕೆರೆಯ ಶ್ರೀ ಶಾಂತಲಿಂಗ ದೇಶಿಕೇಂದ್ರ ಸ್ವಾಮಿಗಳು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ 2 ನೇ ಹಂತದ ಕೋವಿಡ್ ಲಸಿಕೆ ಹಾಕಿಸಿಕೊಂಡರು. ಕೋವಿಡ್ 19 ಎರಡನೇ ಅಲೆ ಹೆಚ್ಚಾಗಿರುವುದರಿಂದ ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಂಡು ಅಂತರ ಕಾಪಾಡಿಕೊಳ್ಳಿ. ಮಾಸ್ಕ್ ಹಾಕಿ ಕೊರೊನೊ ಓಡಿಸೋಣ. ಇದರ ಬಗ್ಗೆ ಜನರಿಗೆ ಅರಿವು ಮೂಡಿಸೋಣ ಎಂದು ಹೇಳಿದರು.
January 12, 2025