ದಾವಣಗೆರೆ, ಏ.30 – ಲಾಕ್‍ಡೌನ್ ನಿಯಮದ ಪ್ರಕಾರ ರೈತ ಬಾಂಧವರಿಗೆ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಸಮಯ ನಿಗದಿ ಮಾಡಿರುವುದ ರಿಂದ ಶೇಂಗಾ, ಮೆಕ್ಕೆಜೋಳ, ತರಕಾರಿಗಳನ್ನು ಕೃಷಿ ಉತ್ಪನ್ನ ಮಾರುಕಟ್ಟೆಗೆ ತಂದ ನಂತರ ಟೆಂಡರ್ ಪ್ರಕ್ರಿಯೆಗೆ ಸಮಯಾವಕಾಶ ಕಡಿಮೆಯಾಗುತ್ತಿದೆ ಮತ್ತು ರೈತರು ಕೃಷಿ ಪರಿಕರಗಳನ್ನು ಖರೀದಿಸಲು ಸಹ ಬಹಳಷ್ಟು ತೊಂದರೆಯಾಗುತ್ತಿದ್ದು, ಅಲ್ಲದೇ ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ತೊಂದರೆ ಆಗುತ್ತಿರುವುದನ್ನು ಮನಗಂಡು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆ ವರೆಗೂ ಸಮಯವಕಾಶ ನೀಡಲು ಮತ್ತು ಗಡಿಭಾಗದಲ್ಲಿ ರೈತಬಾಂಧವರಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸುವಂತೆ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ್ ಮನವಿ ಸಲ್ಲಿಸಿದ್ದಾರೆ.
December 24, 2024