ದಾವಣಗೆರೆ, ಏ.30- ಕೈದಾಳೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.
ಮನೆ ಮನೆಗೆ ಭೇಟಿ ನೀಡಿ, ಜಾಗೃತಿ ಮೂಡಿಸಲಾಗುತ್ತಿದ್ದು, 10ಗಂಟೆಯ ನಂತರವೂ ತೆರೆದಿದ್ದ ಅಂಗಡಿಗಳನ್ನು ನೋಟಿಸ್ ನೀಡುವ ಮೂಲಕ ಮುಚ್ಚಿಸ ಲಾಯಿತು. ಇತರೆ ಜಿಲ್ಲೆಗಳಿಂದ ಗ್ರಾಮಗಳಿಗೆ ವಲಸೆ ಬರುತ್ತಿರುವವರ ಬಗ್ಗೆ ಮಾಹಿತಿ ಪಡೆದು ಅವರ ಆರೋಗ್ಯ ವಿಚಾರಣೆ ಮಾಡುವ ಪ್ರಕಿಯೆ ಆರಂಭಿಸ ಲಾಗಿದೆ. ಗ್ರಾ.ಪಂ. ಅಧ್ಯಕ್ಷೆ ಜಿ.ಆರ್. ನವ್ಯ ಹಾಗೂ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಸಿಬ್ಬಂದಿಗಳು ಹಾಗೂ ಕಾರ್ಯದರ್ಶಿಗಳು ಇದಕ್ಕೆ ಸಾಥ್ ನೀಡಿದರು.