ಹೊನ್ನಾಳಿ, ಮಾ.4- ಹಾಲು ಸಂಗ್ರಹಣಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಹನುಮನಹಳ್ಳಿ ಬಿ.ಜಿ. ಬಸವರಾಜಪ್ಪ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಇಲಾಖೆ, ಜಿಲ್ಲಾ ಸಹಕಾರ ಯೂನಿಯ ನ್‍ಗಳ ಸಂಯುಕ್ತಾಶ್ರಯದಲ್ಲಿ ಹೊನ್ನಾಳಿ-ನ್ಯಾಮತಿ ತಾಲ್ಲೂ ಕುಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ತಾಲ್ಲೂಕಿನ ಗೊಲ್ಲರಹಳ್ಳಿಯಲ್ಲಿ ಹಾಲು ಶೀತಲೀಕರಣ ಕೇಂದ್ರದ ಸಭಾಂಗಣದಲ್ಲಿ ಹಮ್ಮಿ ಕೊಂಡ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಸಂಘದ ವ್ಯವಹಾರ ಪಾರದರ್ಶಕವಾಗಿರಬೇಕು. ಈ ನಿಟ್ಟಿನಲ್ಲಿ ಸಂಘಗಳ ಕಾರ್ಯದರ್ಶಿಗಳು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದ ಪ್ರಭಾರ ವ್ಯವಸ್ಥಾಪಕ ಕೆ.ಎನ್. ಮುರಳೀಧರ್ ಮಾತನಾಡಿ, ಹಾಲು ಉತ್ಪಾದಕರಿಗೆ ಸರ್ಕಾರ ನೀಡುವ ಪ್ರೋತ್ಸಾಹ ಧನ ಪ್ರತಿಯೊಬ್ಬರಿಗೂ ಲಭಿಸಬೇಕು. ಈ ನಿಟ್ಟಿನಲ್ಲಿ ಕಾರ್ಯದರ್ಶಿಗಳು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎನ್.ಎ. ಮುರುಗೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಹಕಾರ ಸಂಘಗಳು ಸಂಜೀವಿನಿ ಇದ್ದಂತೆ. ಅದನ್ನು ಸದ್ಬಳಕೆ ಮಾಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.
ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಎಚ್. ಬಸವರಾಜಪ್ಪ ಮತ್ತಿತರರು ಮಾತನಾಡಿದರು.
ಶಿಮುಲ್‍ನ ನಿವೃತ್ತ ಸಹಾಯಕ ಶಿವಾನಂದ್, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಶೇಖರಪ್ಪ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿ ಗಳಿಗೆ ವಿವಿಧ ವಿಷಯಗಳ ಬಗ್ಗೆ ತರಬೇತಿ ನೀಡಿದರು.
ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಎಂ. ತಿಪ್ಪೇ ಸ್ವಾಮಿ, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ರಾದ ಬಿ.ವಿ. ಚಂದ್ರಶೇಖರ್, ಡಾ.ಜೆ.ಆರ್. ಷಣ್ಮುಖಪ್ಪ, ಎಸ್.ಬಿ. ಶಿವಕುಮಾರ್, ಸಿರಿಗೆರೆ ರಾಜಣ್ಣ, ಟಿ. ರಾಜಣ್ಣ, ಆರ್.ಎಂ. ಮಾಲತೇಶ್, ಡಿ.ಎಂ. ಮುರಿಗೇಂದ್ರಯ್ಯ, ಗಿಡ್ಡಳ್ಳಿ ನಾಗರಾಜ್, ಬಿ. ಶೇಖರಪ್ಪ, ಡಿ. ಶಿವಗಂಗಮ್ಮ, ಅನ್ನಪೂರ್ಣ, ಸಹಕಾರ ಸಂಘಗಳ ಉಪ ನಿಬಂಧಕ ಬಿ. ಜಯಪ್ರಕಾಶ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಚ್. ಸಂತೋಷ್‍ಕುಮಾರ್, ವ್ಯವಸ್ಥಾಪಕ ಕೆ.ಎಂ. ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.