ಹರಪನಹಳ್ಳಿ, ಮೇ 19- ತಾಲ್ಲೂಕಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಸಾರ್ವ ಜನಿಕರ ಆರೋಗ್ಯ , ಕಾನೂನು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಕೆಲವು ಚಟುವಟಿಕೆಗಳನ್ನು ಜಿಲ್ಲೆಯಲ್ಲಿ ನಿಷೇಧಿಸುವ ಕುರಿತು ಪೊಲೀಸ್ ಇಲಾಖೆ ಚಿಂತಿಸಿದೆ.
ಪಟ್ಟಣದ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲು ವೃತ್ತ ನಿರೀಕ್ಷಕ ನಾಗರಾಜ್ ಎಂ. ಕಮ್ಮಾರ್ ಅವರು ಎಸ್‌ಪಿ ಹಾಗೂ ಡಿವೈಎಸ್ಪಿ ಅವರ ಆದೇಶದ ಮೇರೆಗೆ ಪೊಲೀಸ್ ಠಾಣೆ ಮುಂಭಾಗದಲ್ಲಿ 5 ದಿನಗಳ ವಿಶೇಷ ಲಾಕ್‌ಡೌನ್ ಸಲುವಾಗಿ ಬ್ರಿಪಿಂಗ್ ನಡೆಸಲಾಯಿತು. ಈ ಸಂದರ್ಭದಲ್ಲಿ ಪಿಎಸ್‌ಐ ಸಿ. ಪ್ರಕಾಶ್ ಸೇರಿದಂತೆ ಪೊಲೀಸ್ ಸಿಬ್ಬಂದಿ ವರ್ಗದವರು ಹಾಜರಿದ್ದರು.