ಹರಪನಹಳ್ಳಿ, ಆ.2- ಕೋವಿಡ್ 1ನೇ ಹಾಗೂ 2ನೇ ಅಲೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ, ಹದಿನೆಂಟು ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಗೂ 45 ವರ್ಷ ಮೇಲ್ಪಟ್ಟವರಿಗೆ 2ನೇ ಲಸಿಕೆ ಹಾಕಿಸಬೇಕು. 3ನೇ ಅಲೆಯನ್ನು ಎದುರಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಕೆಪಿಸಿಸಿ ಮಾಧ್ಯಮ ವಿಶ್ಲೇಷಕರಾದ ಎಂ.ಪಿ. ವೀಣಾ ಮಹಾಂತೇಶ್ ತಹಶೀಲ್ದಾರ್ ಎಲ್.ಎಂ. ನಂದೀಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷರಾದ ಕವಿತಾ ವಾಗೀಶ್, ಚಿಗಟೇರಿ ಗ್ರಾ.ಪಂ. ಮಾಜಿ ಅಧ್ಯಕ್ಷರಾದ ರೇಣುಕಮ್ಮ, ನ್ಯಾಯವಾದಿ ದುಗ್ಗಾವತಿ ಸಿದ್ಧಲಿಂಗನಗೌಡ, ಬಳ್ಳಾರಿ ಜಿಲ್ಲಾ ಸೋನಿಯಾ ಗಾಂಧಿ ಬ್ರಿಗೇಡ್ ಪ್ರಧಾನ ಕಾರ್ಯದರ್ಶಿ ಗಾಯತ್ರಿ ದೇವಿ, ಯುವ ಕಾಂಗ್ರೆಸ್ ಉಪಾಧ್ಯಕ್ಷ ದಾದಾಪೀರ್ ಮಕರಬ್ಬಿ, ಪ್ರಧಾನ ಕಾರ್ಯದರ್ಶಿ ಸಿ. ಮಂಜುನಾಥ್, ಯುವ ಕಾಂಗ್ರೆಸ್ ಕಾರ್ಯಕರ್ತರಾದ ಕಾರ್ತಿಕ್, ಮದನ್ ಸ್ವಾಮಿ, ಎಂ. ಅಂಜಿನಪ್ಪ, ಪ್ರಜ್ವಲ್ ಕುಮಾರ್, ಅರುಣ್ ಕುಮಾರ್, ಗುರು ಬಸವರಾಜ್ ಇನ್ನಿತರರು ಉಪಸ್ಥಿತರಿದ್ದರು.