ದಾವಣಗೆರೆ, ನ.10- ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷರೂ, ನಾಯಕ ವಿದ್ಯಾರ್ಥಿ ನಿಲಯದ ಅಧ್ಯಕ್ಷರೂ ಆದ ಬಿ. ವೀರಣ್ಣ ಅವರ ಮಾತೃಶ್ರೀ ಅವರು ಈಚೆಗೆ ನಿಧನರಾದ ಹಿನ್ನೆಲೆಯಲ್ಲಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ವೀರಣ್ಣ ಅವರ ನಿವಾಸಕ್ಕೆ ಇಂದು ಸಂಜೆ ಭೇಟಿ ನೀಡಿ, ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಮೂಲಕ ಧೈರ್ಯ ತುಂಬಿದರು. ಇದೇ ಸಂದರ್ಭದಲ್ಲಿ ಬಿ. ವೀರಣ್ಣ ಮತ್ತು ನಗರ ಪಾಲಿಕೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮಿದೇವಿ ಹಾಗೂ ಕುಟುಂಬ ವರ್ಗದವರು ಸ್ವಾಮೀಜಿಯವರನ್ನು ಸನ್ಮಾನಿಸಿ, ಗೌರವಿಸಿದರು.
February 25, 2025