ದಾವಣಗೆರೆ, ಜೂ. 16- 15ನೇ ಹಣಕಾಸು, ನರೇಗಾ, ಗ್ರಾಮ ಪಂಚಾಯತಿ ಸ್ವಂತ ಸಂಪನ್ಮೂಲದಿಂದ ಸರ್ಕಾರಿ ಆದೇಶದಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗೆ ವೇತನ ನೀಡಲು ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಪ್ರತಿಭಟನೆಯ ಕರೆ ಮೇರೆಗೆ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಹಲವಾರು ಬೇಡಿಕೆಗಳ ಭಿತ್ತಿ ಪತ್ರಗಳನ್ನು ಹಿಡಿದು ಗ್ರಾಮ ಪಂಚಾಯತಿ ನೌಕರರು ಪ್ರತಿಭಟನೆ ನಡೆಸಿದರು. ನಂತರ ಗ್ರಾಮ ಪಂಚಾಯತಿಗಳ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ವೇತನ ಪಾವತಿಸುವಂತೆ ಜಿಲ್ಲಾಧ್ಯಕ್ಷ ಉಮೇಶ್ ಕೈದಾಳೆ ಆಗ್ರಹಿಸಿದ್ದಾರೆ.
January 9, 2025