ಕೊರೊನಾ ನಿಯಂತ್ರಣ ಮಾಡುವಲ್ಲಿ ಸರ್ಕಾರ ಯಶಸ್ವಿ

ಲಕ್ಕಶೆಟ್ಟಿಹಳ್ಳಿ : ಬಿಜೆಪಿ ರೈತ ಮೋರ್ಚಾ ಘಟಕ ವೃಕ್ಷಾರೋಪಣದಲ್ಲಿ ಮಾಜಿ ಶಾಸಕ ಬಿ.ಪಿ. ಹರೀಶ್

ಮಲೇಬೆನ್ನೂರು, ಜೂ.27- ಲಕ್ಕಶೆಟ್ಟಿಹಳ್ಳಿ ಗ್ರಾಮದಲ್ಲಿ ಹರಿಹರ ತಾಲ್ಲೂಕು ಬಿಜೆಪಿ ರೈತ ಮೋರ್ಚಾ ಘಟಕದ ವತಿಯಿಂದ ಪ್ರಧಾನಿ ಮೋದಿ ಅವರ `ಮನ್‌ ಕಿ ಬಾತ್‌’ ಕಾರ್ಯಕ್ರಮ ವೀಕ್ಷಿಸಿ, ನಂತರ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ವೃಕ್ಷಾರೋಪಣ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಶಾಸಕ ಬಿ.ಪಿ. ಹರೀಶ್‌ ಮಾತನಾಡಿ, ಕೊರೊನಾ ನಿಯಂತ್ರಿಸುವಲ್ಲಿ ಬಿಜೆಪಿ ಸರ್ಕಾರ ಯಶಸ್ವಿಯಾಗಿದ್ದು, ಸಾರ್ವಜನಿಕರು ಮುಂದೆಯೂ ಸಹ ಜಾಗೃತರಾಗಿ ಪ್ರತಿಯೊಬ್ಬರೂ ತಪ್ಪದೇ ಲಸಿಕೆ ಪಡೆದುಕೊಳ್ಳಿ ಎಂದು ಮನವಿ ಮಾಡಿದರು.

ಪ್ರಧಾನಿ ಮೋದಿ ಅವರು ದೇಶದ ಅಭಿವೃದ್ಧಿ ಮತ್ತು ಭದ್ರತೆ ವಿಚಾರದಲ್ಲಿ ಉತ್ತಮ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಮುಂಬರುವ ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಈಗಿನಿಂದಲೇ ಕಾರ್ಯ ನಿರ್ವಹಿಸಬೇಕೆಂದು ಹರೀಶ್‌ ಕರೆ ನೀಡಿದರು.

ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಲೋಕಿಕೆರೆ ನಾಗರಾಜ್‌ ಮಾತನಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಲಿಷ್ಠವಾಗಿದ್ದು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಹರಿಹರ ತಾ. ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕೊಂಡಜ್ಜಿ ವೀರಣ್ಣ ಮಾತನಾಡಿ, ಶುದ್ಧ ಗಾಳಿ ಹಾಗೂ ನೀರನ್ನು ನಾವು ಪಡೆಯಬೇಕಾದರೆ ಗಿಡ-ಮರಗಳನ್ನು ಬೆಳೆಸಬೇಕು. ಅದಕ್ಕಾಗಿ ಬಿಜೆಪಿ ರೈತ ಮೋರ್ಚಾ ವೃಕ್ಷಾರೋಪಣ ಕಾರ್ಯಕ್ರಮದಡಿ ಎಲ್ಲಾ ಕಡೆ ಸಸಿ ನೆಡೆಸುತ್ತಿದೆ. ನಾವು ನೆಟ್ಟಿರುವ ಗಿಡಗಳನ್ನು ಮರಗಳನ್ನಾಗಿ ಬೆಳೆಸುವ ಜವಾಬ್ದಾರಿಯನ್ನು ನಮ್ಮ ಕಾರ್ಯಕರ್ತರು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಮುಖಂಡ ಚಂದ್ರಶೇಖರ್‌ ಪೂಜಾರ್‌ ಮಾತನಾಡಿದರು.

ಗ್ರಾ.ಪಂ. ಸದಸ್ಯರಾದ ಎನ್‌.ಎಂ. ನಾಗರಾಜ್‌, ಕರಿಬಸಮ್ಮ, ಮಲ್ಲಿಕಾರ್ಜುನಪ್ಪ, ನಗರಸಭೆ ಸದಸ್ಯ ರಜನಿ, ಹರಿಹರ ತಾ. ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಆದಾಪುರ ವೀರೇಶ್‌, ಕೆ.ಎನ್‌. ಹಳ್ಳಿ ಹುಗ್ಗಿ ಮಹಾಂತೇಶ್‌, ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಕಿರಣ್‌ ಮೂಲಿಮನಿ, ರಾಘವೇಂದ್ರ, ಲೋಕಿಕೆರೆ ಅಣ್ಣಪ್ಪ, ಗ್ರಾಮದ ಎಂ.ಜಿ. ಬಸವರಾಜ್‌, ಶಾಮನೂರು ವಿಜಯ್‌, ಸುರೇಶ್‌, ಷಣ್ಮುಖಪ್ಪ, ನಾಗಸನಹಳ್ಳಿ ಸುರೇಶ್‌, ಗುಳ್ಳೆಪ್ಪ, ಮಹೇಶಪ್ಪ ಮತ್ತಿತರರು ಭಾಗವಹಿಸಿದ್ದರು.

error: Content is protected !!