ದಾವಣಗೆರೆ, ಜೂ.27- ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತು ವಾರಿ ರಣದೀಪ್ ಸುರ್ಜೇವಾಲಾ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಝೂಮ್ ಆನ್ಲೈನ್ ಮೀಟಿಂಗ್ ನಡೆಯಿತು. ಈ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ್, ಸಲೀಂ ಮಹಮದ್, ಈಶ್ವರ್ ಖಂಡ್ರೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಭಾಗವಹಿಸಿ, ಕೋವಿಡ್ ಸಮಯದಲ್ಲಿ ಸರ್ಕಾರದ ನಡವಳಿಕೆ ಹಾಗೂ ಸಂತ್ರಸ್ತರಿಗೆ ನೀಡಿದ ಚಿಕಿತ್ಸೆ ಮತ್ತು ಚಿಕಿ ತ್ಸೆಯ ನಂತರ ಅವರ ಪರಿಸ್ಥಿತಿ ಅವಲೋಕಿಸುವ ಕುರಿತು ಸಲಹೆ ನೀಡಿದರು. ಪಕ್ಷದ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ, ಬ್ಲಾಕ್ ಅಧ್ಯಕ್ಷರುಗಳಾದ ಮಾಗಾನಹಳ್ಳಿ ಪರಶುರಾಮ, ಅಯೂಬ್ ಪೈಲ್ವಾನ್, ಎಪಿ ಎಂಸಿ ಮಾಜಿ ಅಧ್ಯಕ್ಷ ಮುದೇ ಗೌಡ್ರ ಗಿರೀಶ್, ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್, ಮುಖಂಡ ಬೇತೂರ್ ಕರಿಬಸಪ್ಪ, ತರಕಾರಿ ಚಂದ್ರಪ್ಪ, ಸಾಮಾಜಿಕ ಜಾಲತಾಣದ ಕೆ.ಎಲ್.ಹರೀಶ್ ಬಸಾಪುರ ಮತ್ತಿತರರಿದ್ದರು.