ಮಕ್ಕಳು ಹಿರಿಯರಿಗೆ, ಶಿಕ್ಷಕರಿಗೆ ಗೌರವ ನೀಡಬೇಕು

ಹರಿಹರ : ಮಕ್ಕಳ ಹಕ್ಕುಗಳ ಅರಿವು ಕಾರ್ಯಕ್ರಮದಲ್ಲಿ ನ್ಯಾ|| ಯಶವಂತ್ ಕುಮಾರ್ ಕರೆ

ಹರಿಹರ, ನ.18- ಮಕ್ಕಳು ಯಾವಾಗಲೂ ಹಿರಿಯರಿಗೆ ಮತ್ತು ಶಿಕ್ಷಕರಿಗೆ ಗೌರವ ನೀಡಬೇಕು, ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿರಬೇಕು ಎಂದು ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶ ರಾದ ಆರ್. ಯಶವಂತ್ ಕುಮಾರ್ ತಿಳಿಸಿದರು.

ನಗರದ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹಿರಿಯ ಪ್ರಾಥಮಿಕ ಶಾಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಹಾಗೂ ಮಕ್ಕಳ ಹಕ್ಕುಗಳ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿರಬೇಕು. ಜೊತೆಗೆ ಹೆತ್ತವರಿಗೆ ಮತ್ತು ಪಾಠ ಕಲಿಸಿದ ಶಿಕ್ಷಕರಿಗೆ ವಿಶೇಷ ಗೌರವ ನೀಡಿ, ನಿಮ್ಮ ವಿದ್ಯಾರ್ಥಿ ಜೀವನ ಸಾರ್ಥಕ ಪಡಿಸಿಕೊಳ್ಳಿ ಎಂದರು. 

ಪ್ರಧಾನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮಹದೇವ ಕಾನಟಿ, ವಕೀಲರ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ಸಾಕಮ್ಮ, ಸಂಘದ ಕಾರ್ಯದರ್ಶಿ ಗಣೇಶ್ ಕೆ. ದುರ್ಗದ, ಮುಖ್ಯ ಅತಿಥಿಗಳಾಗಿ ಸರ್ಕಾರಿ ಸಹಾಯಕ ಅಭಿಯೋಜಕ ಪ್ರವೀಣ್‌ಕುಮಾರ್, ವಕೀಲ  ಕೆ.ಚಂದ್ರಾಚಾರಿ ಮತ್ತು ಇತರರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಶ್ರೀಮತಿ ಭಾಗೀರಥಿ, ಶ್ರೀಮತಿ ಲೋಹಿತಾ ವಿ. ಮಕ್ಕಳ ಹಕ್ಕುಗಳ ಬಗ್ಗೆ ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ರುದ್ರಗೌಡ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕ ಬಿ.ಬಿ.ರೇವಣನಾಯ್ಕ, ಸಹ ಶಿಕ್ಷಕರಾದ ಎಂ.ನಾಗರಾಜ್, ಗಿರಿಜ, ಕೆ.ಇ.ಹೊನಕೇರಪ್ಪ, ಎಂ.ಮಂಜುನಾಥ್, ಸಿ.ಮಂಜುನಾಥಪ್ಪ, ಆರ್.ಜಿ.ಮುರುಘರಾಜೇಂದ್ರ, ಶಿಕ್ಷಣ ಸಂಯೋಜಕರಾದ ತೀರ್ಥಪ್ಪ, ಲಿಂಗರಾಜು, ಗಿರೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

error: Content is protected !!