ನಾರಾಯಣ ಗುರು ಜಯಂತಿ ಆಚರಣೆ

ಜಗಳೂರು, ಆ.24- ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.

  ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ತಹಶೀಲ್ದಾರ್ ಡಾ. ನಾಗವೇಣಿ, ಜಾತಿ, ಮತ ಭೇದಗಳು ಹೆಚ್ಚಾಗಿದ್ದ ವೇಳೆ ನಾರಾಯಣ ಗುರು ಗಳು  ಸಮಾಜ ಸುಧಾರಕರಾಗಿ ಉದಯಿಸಿ  ಸಮಾಜದ ತಾರತಮ್ಯ ಹೋಗಲಾಡಿಸಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟರು ಎಂದು ತಿಳಿಸಿದರು. ಸಂಸ್ಕೃತ ಭಾಷೆಯಲ್ಲಿ ಅದ್ವೀತಿಯ ಪಂಡಿತರಾಗಿದ್ದ ಅವರು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.  ಇಂತಹ ಮಹಾನ್ ವ್ಯಕ್ತಿಯ ಆದರ್ಶಗಳನ್ನು ಮೈಗೂಡಿಸಿಕೊಳ್ಳೋಣ ಎಂದು ಕರೆ‌ ನೀಡಿದರು.

ಈ ಸಂದರ್ಭದಲ್ಲಿ ತಾ.ಪಂ‌. ಮಾಜಿ ಸದಸ್ಯ ಸಿದ್ದೇಶ್, ಮುಖಂಡರಾದ ಸೂರಲಿಂಗಪ್ಪ, ರಾಜಣ್ಣ, ಶಿರಸ್ತೇದಾರ್‌ ಧನಪಾಲ್ ಶೆಟ್ಟಿ, ರಾಜಸ್ವ ನಿರೀಕ್ಷಕ ಕುಬೇಂದ್ರನಾಯ್ಕ, ಇನ್ನಿತರರಿದ್ದರು.

error: Content is protected !!