ದಾವಣಗೆರೆ, ಅ. 9 – ಜಿಲ್ಲಾ ಕಾಂಗ್ರೆಸ್ ವತಿಯಿಂದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಬಳ್ಳಾರಿ ವಿಭಾಗದ ಉಸ್ತುವಾರಿ ರಿತೀಶ್ ಇಂದು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ನೋಂದಣಿ ಮಾಡಿ
ಪಕ್ಷ ಸಂಘಟನೆ ಮಾಡಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಮಾತನಾಡಿ, ಕಾಂಗ್ರೆಸ್ ಪಕ್ಷದ ಅವಿಭಾಜ್ಯ ಅಂಗ ಯುವ ಕಾಂಗ್ರೆಸ್ ನಿಂದ ಬಂದಂತಹ ಅನೇಕ ನಾಯಕರುಗಳು ಪಕ್ಷದಲ್ಲಿ ಉನ್ನತ ಸ್ಥಾನ ಪಡೆದಿದ್ದಾರೆ.
ಈಗಿರುವಂತಹ ಕೆಪಿಸಿಸಿ ಅಧ್ಯಕ್ಷರೂ ಸಹ ಯುವ ಕಾಂಗ್ರೆಸ್ನಿಂದಲೇ ಬೆಳೆದು ಬಂದಂತವರು ಎಂದು ತಿಳಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಖಾಲಿದ್, ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಎಚ್.ಜೆ. ಮೋಹಿನುದ್ದೀನ್, ಯುವ ಕಾಂಗ್ರೆಸ್ ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮಾತನಾಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ನಿಖಿಲ್ ಕೊಂಡಜ್ಜಿ, ಜಿಲ್ಲಾ ಯುವ
ಕಾಂಗ್ರೆಸ್ ಉಪಾಧ್ಯಕ್ಷ ಎಲ್.ಎಮ್.ಎಚ್. ಸಾಗರ್, ಮೊಹಮ್ಮದ್ ಸಾಧಿಕ್ ಸದ್ದಾಂ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.