ಕೊರೊನಾ ನಿಯಂತ್ರಣಕ್ಕೆ ಎಸ್‍ಎಂಎಸ್ ಮುಖ್ಯ

ಜಗಳೂರು, ಅ.23 – ಸಂಚಾರ ಸಮಸ್ಯೆ, ಆಟೋಗಳಲ್ಲಿ ವಿದ್ಯಾರ್ಥಿ ಗಳನ್ನು ತುಂಬಿಕೊಂಡು ಬರುವುದು, ಕಾಲೇಜುಗಳಿಗೆ ಪೊಲೀಸ್ ಸಿಬ್ಬಂದಿ ಗಸ್ತು, ನಿಯಮಗಳನ್ನು ಉಲ್ಲಂಘನೆ ಮಾಡುತ್ತಿ ರುವ ಕೆಲವು ಬಾರ್‍ಗಳ ವಿರುದ್ಧ ಕ್ರಮ ಕೈಗೊಳ್ಳ ಲಾಗುವುದು ಎಂದು ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ಎಚ್ಚರಿಸಿದ್ದಾರೆ.  

ಪಟ್ಟಣದ ಪೊಲೀಸ್ ಠಾಣೆ ಮುಂಭಾಗದಲ್ಲಿ ನಡೆದ ಎಸ್‍ಸಿ-ಎಸ್ಟಿ ಕುಂದುಕೊರತೆ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ತಾಲ್ಲೂಕಿನ ಸಂಚಾರ ಸಮಸ್ಯೆ ಸೇರಿದಂತೆ ಸಾಮ ರಸ್ಯ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸನ್ನದ್ಧವಾಗಿದ್ದು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲಾಗುವುದು ಎಂದರು.

ಯಾವುದೇ ಗ್ರಾಮಗಳಲ್ಲಿ ಅಹಿತಕರ ಘಟನೆ ಗಳು ಕಂಡು ಬಂದಲ್ಲಿ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು. ಕೆಲವು ಪ್ರಕರಣಗಳಲ್ಲಿ ಠಾಣೆಗೆ ಬರುವವರು ಕೇಸ್ ದಾಖಲಿಸುವ ಮುನ್ನ ಬದ್ಧ ರಾಗಿರದೆ ಕೇವಲ ರಾಜೀ ಸಂಧಾನಕ್ಕೆ ಅಂಟಿಕೊಳ್ಳುವುದರಿಂದ ಪೊಲೀಸ್ ಇಲಾಖೆಗೆ ಗೊಂದಲವುಂಟಾ ಗುತ್ತಿದ್ದು, ಎಫ್‍ಐಆರ್ ದಾಖಲು ಮಾಡಿಸಿದರೆ ಅಗತ್ಯ ಕಾನೂನಿನಡಿ ಯಲ್ಲಿ ನ್ಯಾಯ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದರು.

ಮಾಸ್ಕ್ ಹಾಕದವರಿಗೆ ದಂಡ ಹಾಕುವ ಆದೇಶವನ್ನು ಸರ್ಕಾರ ಹೊರಡಿಸಿದ್ದು, ನಮ್ಮ ಇಲಾಖೆಯ ವತಿಯಿಂದ ಜನರಲ್ಲಿ ಜಾಗೃತಿ ಮೂಡಿಸಿ ಜೊತೆಗೆ ನಾವೇ ಖುದ್ದಾಗಿ ಮಾಸ್ಕ್ ವಿತರಣೆ ಮಾಡುತ್ತಿದ್ದೇವೆ. ಕೊರೊನಾ ನಿಯಂತ್ರ ಣಕ್ಕೆ ಎಸ್‍ಎಂಎಸ್ ಅಂದರೆ ಸ್ಯಾನಿಟೈಸರ್, ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಬಹು ಮುಖ್ಯವಾಗಿದ್ದು, ಈ ನಿಟ್ಟಿಯಲ್ಲಿ ಪ್ರತಿಯೊಬ್ಬರೂ ಜಾಗೃತರಾಗಬೇಕಿದೆ ಎಂದು ಅವರು ತಿಳಿಸಿದರು. 

ಸಿಪಿಐ ದುರುಗಪ್ಪ ಮಾತನಾಡಿ, ಕಳೆದ ಆರು ತಿಂಗಳಿಂದ ಕೊರೊನಾ ಸಂಕಷ್ಟದಲ್ಲಿ ಇಲಾಖೆ ಸಿಬ್ಬಂದಿಗಳು ಹಗಲಿರುಳೆನ್ನದೇ ಜನರಿಗೆ ಜಾಗೃತಿ ಮೂಡಿಸಿದ್ದಾರೆ. ಇಲಾಖೆಯ 21 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಅದರಲ್ಲಿ ಓರ್ವ ಸಿಬ್ಬಂದಿ ಸಾವನ್ನಪ್ಪಿರುವುದು ದುರಾದೃಷ್ಟಕರ ಸಂಗತಿ ಎಂದ ಅವರು, ಪಟ್ಟಣದ ಎಂಜಿ ಸರ್ಕಲ್‍ನಲ್ಲಿ ಸಂಚಾರ ದಟ್ಟಣೆ ಅಧಿಕವಾಗುವುದರಿಂದ ಸಿಬ್ಬಂದಿ ನಿಯೋಜನೆ ಮಾಡಲಾಗುವುದು ಎಂದರು. 

ಪಿಎಸ್‍ಐ ಉಮೇಶ್ ಬಾಬು, ಬಿಳಿಚೋಡು ಪಿಎಸ್‍ಐ ಶ್ರೀಧರ್, ಎಎಸ್‍ಐ ಚಂದ್ರಶೇಖರ್, ಮಹೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.  

error: Content is protected !!