ದಾವಣಗೆರೆ, ಅ.27- ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಆವರಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಾಬಪ್ಪ ಕಾನೂನು ಸೇವಾ ಸಲಹಾ ಪೆಟ್ಟಿಗೆಯನ್ನು ಉದ್ಘಾಟಿಸಿದರು.
ಜನತೆ ತಮ್ಮ ಯಾವುದೇ ಕುಂದು-ಕೊರತೆಗಳಿದ್ದಲ್ಲಿ ನಿರ್ಭಯವಾಗಿ ಕಾನೂನು ಸೇವಾ ಸಲಹಾ ಪೆಟ್ಟಿಗೆಯಲ್ಲಿ ತಮ್ಮ ದೂರುಗಳು, ಕುಂದು-ಕೊರತೆಗಳು ಮತ್ತು ಅಹವಾಲುಗಳನ್ನು ಸಲ್ಲಿಸಿದಲ್ಲಿ ಅವುಗಳನ್ನು ಶೀಘ್ರವಾಗಿ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು ಸಮಸ್ಯೆಗಳಿಗೆ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದರು.
ಜನರನ್ನು ಅಲೆದಾಡಿಸುವುದನ್ನು ತಪ್ಪಿಸುವ ಸಲುವಾಗಿ ನಿಗದಿತ ಸ್ಥಳಗಳಲ್ಲಿ ದೂರು ಪೆಟ್ಟಿಗೆಗಳನ್ನು ಇಡಲಾಗಿದ್ದು, ಜನತೆ ಅದರ ಸದುಪಯೋಗ ಪಡೆದುಕೊಳ್ಳಬೇ ಕೆಂದು ಸೂಚಿಸಿದರು.
ಕಾರ್ಯಕ್ರಮ ದಲ್ಲಿ ಮಾತನಾ ಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್.ಟಿ. ಮಂಜುನಾಥ್ ಅವರು, ಸಾರ್ವಜನಿ ಕರು ತಮ್ಮ ದೂರುಗಳನ್ನು ಸಲ್ಲಿಸುವಾಗ ಹೆಸರು, ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕೆಂದರು.
ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಹೆಚ್. ಅರುಣ್‍ಕುಮಾರ್ ಮಾತನಾಡಿ, ಇಂದು ಜನತೆ ತಮ್ಮ ಜೀವನ ನಿರ್ವಹಣೆ ಮಾಡುವುದೇ ದುಸ್ತರವಾಗಿದ್ದು, ಜನರ ನೆರವಿಗೆ ಇಲಾಖೆಗಳು ಮುಂದಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಅಧ್ಯಕ್ಷರಾದ ಜಬೀನಾ ಖಾನಂ ಮಾತನಾಡಿದರು. ನೆರಳು ಬೀಡಿ ಕಾರ್ಮಿಕರ ಯೂನಿಯನ್ ಕಾರ್ಯದರ್ಶಿ ಎಂ. ಕರಿಬಸಪ್ಪ ಸ್ವಾಗತಿಸಿದರು.